ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಡಿಸಿಪಿ ಲಕ್ಷ್ಮಿ ಪ್ರಸಾದ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರನ್ವಯ ಮೇ 10 ರಿಂದ ಮೇ 14 ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಲಕ್ಷೀ ಪ್ರಸಾದ್ ತಿಳಿಸಿದ್ದಾರೆ.

ಮೆರವಣಿಗೆ ಮಾಡುವುದನ್ನು, ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು, ಸಿಡಿಮದ್ದು, ಪಟಾಕಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿ, ಭಾರತೀಯ ದಂಡ ಸಂಹಿತೆ ಕಲಂ 144 ರನ್ವಯ ಮತ ಎಣಿಕೆ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲು ಮತ ಎಣಿಕೆ ಕೇಂದ್ರದ ಸುತ್ತ ಹಾಗೂ ಮತ ಎಣಿಕೆ ಕೇಂದ್ರದ ಒಳಗೆ 2 ಎಸಿಪಿ, 9 ಇನ್ಸ್ಪೆಕ್ಟರ್ 29 ಜನ ಪಿಎಸ್ಐ ಹಾಗೂ 250 ಪೊಲೀಸ್ ಸಿಬ್ಬಂದಿಗಳನ್ನು ಹಾಗೂ 3 ಕೆಎಸ್ ಆರ್ ಪಿ ತುಕಡಿ ಮತ್ತು 2 ಕಂಪನಿ ಬಿಎಸ್ಎಫ್ ಅನ್ನು ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.