ಹೊಸಕೋಟೆ ತಾಲೂಕಿನ ಯನಗುಂಟೆ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬೆಂಕಿ..!

ಬೆಂಗಳೂರು ಗ್ರಾಮಾಂತರ ಮೇ15.

ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಯನಗುಂಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ತಡರಾತ್ರಿ ಅಂಬೇಡ್ಕರ್ ಪ್ರತಿಮೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ .ಕೂಡಲೇ ಪ್ರತಿಮೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಅಗ್ರಹಿಸಿದ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 207 ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ಶಾಲಾ ಕಾಲೇಜು ಹಾಗು ಕಚೇರಿಗಳಿಗೆ ತೆರಳಬೇಕಿದ್ದವರು ಟ್ರಾಫಿಕ್ ನಲ್ಲಿ ಸಂಕಷ್ಟದ ಪರಿಸ್ಥಿತಿ ಎದುರಿಸಬೇಕಾಯಿತು.

ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಸೂಲಿಬೆಲೆ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಮಾಡಿದ ಪ್ರಯತ್ನ ವ್ಯರ್ಥವಾಯಿತು. ಪಟ್ಟು ಬಿಡದ ಪ್ರತಿಭಟನಾಕಾರರು ಧರಣಿಯನ್ನು ಮುಂದುವರಿಸಿದ್ದಾರೆ.