ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ !
ವಿಜಯ ದರ್ಪಣ ನ್ಯೂಸ್…. ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ರಾಮದಾಸ್ ನಿವೃತ್ತಿ ಘೋಷಣೆ ! ಮೈಸೂರು ತಾಂಡವಪುರ ಜನವರಿ 2: ನಾನು ಬಿಜೆಪಿ ಬಿಡುವುದಿಲ್ಲ. ಆದರೆ,ಇನ್ನು ಎಂದೂ ಚುನಾವಣಾ ರಾಜಕೀಯ ಮಾಡುವುದಿಲ್ಲ. ಪರಿಸರ ಉಳಿಸುವ ನಿಟ್ಟಿನಲ್ಲಿ ಸಮಾಜ ಸೇವೆ ಮುಂದುವರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ವತಿಯಿಂದ ಹೊರತಂದಿರಿವ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ…
