ಇಂದಿನಿಂದ ಕರ್ನಾಟಕದ ವಿಧಾನಸಭಾ ಅಧಿವೇಶನ ಪ್ರಾರಂಭ…….
ವಿಜಯ ದರ್ಪಣ ನ್ಯೂಸ್… ಇಂದಿನಿಂದ ಕರ್ನಾಟಕದ ವಿಧಾನಸಭಾ ಅಧಿವೇಶನ ಪ್ರಾರಂಭ……. ರಾಜ್ಯದ 224 ಚುನಾಯಿತ ಶಾಸಕರಾದ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಒಟ್ಟಿಗೆ ಸೇರಿ ವಿಚಾರ ವಿನಿಮಯ ಮಾಡುವ ಸಮಾವೇಶ. ಇದನ್ನು ಕೆಳಮನೆ ಎಂದು ಕರೆಯಲಾಗುತ್ತದೆ. ಹಾಗೆಯೇ 75 ಜನ ವಿಧಾನಪರಿಷತ್ತಿನ ಸದಸ್ಯರ ಮತ್ತೊಂದು ಸಭೆ ಇದೇ ರೀತಿ ಕಾರ್ಯ ನಿರ್ವಹಿಸುತ್ತದೆ. ಇದನ್ನು ವಿಧಾನ ಪರಿಷತ್ತು ಅಥವಾ ಮೇಲ್ಮನೆ ಎಂದು ಕರೆಯಲಾಗುತ್ತದೆ…… ಶಾಸಕಾಂಗದ ಬಹುಮುಖ್ಯ ಭಾಗವಾದ ಈ ಅಧಿವೇಶನಕ್ಕಾಗಿ ರಾಜ್ಯ ಬೊಕ್ಕಸದ ಬಹುದೊಡ್ಡ ಹಣವನ್ನು ಖರ್ಚು ಮಾಡಲಾಗುತ್ತದೆ. 38 ಜನರ…