ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ……
ವಿಜಯ ದರ್ಪಣ ನ್ಯೂಸ್… ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ…… ನನ್ನ ಹುಟ್ಟಿಸಿದ ನೋವಿಗೇ ನನ್ನಮ್ಮ ತೀರಿಕೊಂಡಿದ್ದಳು. ಅಮ್ಮನನ್ನು ಕೊಂದ ಪಾಪಿ ಎನ್ನುವ ಅಪವಾದ ಹೊತ್ತೇ ಜನಿಸಿದೆನು. ಅಮ್ಮ, ಅಮ್ಮನ ಎದೆ ಹಾಲು, ಅಮ್ಮನ ಕ್ಯೆತುತ್ತು, ಅಮ್ಮನ ಪ್ರೀತಿ ಇಂದಿಗೂ ಅನುಭವವೇ ಆಗಿಲ್ಲ. ಆದರೆ ಅಪ್ಪನಲ್ಲದೆ ಇನ್ನೊಂದು ಸಂಬಂಧವೇ ನನಗೆ ತಿಳಿದಿಲ್ಲ. ನನ್ನ ಬೆಳಗು, ನನ್ನ ಸ್ನಾನ, ನನ್ನ ತಿಂಡಿ, ನನ್ನ ಊಟ, ನನ್ನ ಅಳು, ನನ್ನ ನಗು, ನನ್ನ ಕೋಪ, ನನ್ನ ಸ್ಹೇಹಿತ, ನನ್ನ ಶತ್ರು, ನನ್ನ ನಿದ್ದೆ…