ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು…….
ವಿಜಯ ದರ್ಪಣ ನ್ಯೂಸ್ ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು……. ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ ಸಂಸದರು ಚುನಾವಣಾ ಪ್ರಚಾರ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕಾರಟಗಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂಬ ಸುದ್ದಿ ಇದೆ. ಅಂದರೆ ನಾವೆಲ್ಲರೂ ಎಂತಹ ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ನಾವೇ ಮರೆಯುತ್ತಿದ್ದೇವೆ ಅಥವಾ ನಿರ್ಲಕ್ಷಿಸುತ್ತಿದ್ದೇವೆ……..