ಹಸಿರುಮನೆ (ಗ್ರೀನ್ ಹೌಸ್) ಘಟಕ ನಿರ್ಮಾಣಕ್ಕೆ ಸಹಾಯಧನ.
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 13. ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 24 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಟಾನಗೊಳಿಸಲು ಅನುಮೋದನೆಗೊಂಡಿರುತ್ತದೆ. ಒಂದು ಗ್ರಾಮ ಪಂಚಾಯಿತಿಯಲ್ಲಿ ಒಬ್ಬ ಫಲಾನುಭವಿಗೆ ಸವಲತ್ತನ್ನು ಮಿತಿಗೊಳಿಸಿದ್ದು, ಅನುದಾನವು ಲಭ್ಯವಿದ್ದಲ್ಲಿ ಒಂದಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಸವಲತ್ತನ್ನು ನೀಡಬಹುದಾಗಿರುತ್ತದೆ….