ಯೇಸುಕ್ರಿಸ್ತನ ಜನ್ಮದಿನದಂದು ಕ್ರಿಶ್ಚಿಯನ್ ಧರ್ಮದ ಅನುಯಾಯಿಗಳ ಒಳಿತು ಕೆಡಕುಗಳ ಬಗ್ಗೆ…….
ವಿಜಯ ದರ್ಪಣ ನ್ಯೂಸ್ ವಿಶ್ವದ ಮಹಾನ್ ದಾರ್ಶನಿಕರಲ್ಲಿ ಒಬ್ಬರಾದ ಜೀಸಸ್ ಕ್ರೈಸ್ಟ್ ಅವರನ್ನು ಕ್ರಿಸ್ ಮಸ್ ಸಮಯದಲ್ಲಿ ನೆನೆಯುತ್ತಾ……. ನಿಮ್ಮ ಶತ್ರುಗಳನ್ನು ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ ಎಂದು ಶಾಂತಿಯ ಸಂದೇಶ ನೀಡಿದ ಮತ್ತು ವಿಶ್ವದಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು, ಬೆಂಬಲಿಗರನ್ನು, ಹಿಂಬಾಲಕರನ್ನು ಹೊಂದಿರುವ ಕ್ರಿಶ್ಚಿಯನ್ ಧರ್ಮದ ಹುಟ್ಟಿಗೆ ಕಾರಣರಾದ ಯೇಸು ಕ್ರಿಸ್ತ ಅನೇಕ ವಿಷಯಗಳಲ್ಲಿ ಇಂದಿಗೂ ಪ್ರಸ್ತುತರಾಗುತ್ತಾರೆ. ಸೇವೆಯ ಮುಖಾಂತರ ಬದುಕಿನ ಸಾರ್ಥಕತೆಯನ್ನು ಕಾಣುವ ಒಂದು ಅಪೂರ್ವ ಚಿಂತನೆಯನ್ನು ಬಹಳ ಹಿಂದೆಯೇ ಪ್ರತಿಪಾದಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ….
