ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 1- ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ಜಾರಿ ಮಾಡಲು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ…