ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್ ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05 ಖಾಸಗಿ ಶಾಲೆಗಳಲ್ಲಿ ನೀಡುವಂತಹ ಶಿಕ್ಷಣ ಸೌಲಭ್ಯವು ಸರ್ಕಾರಿ ಶಾಲೆಗಳಲ್ಲಿ ಸಿಗುವಂತಾಗಬೇಕು, ಗುಣಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳನ್ನು ಉನ್ನತ ಹುದ್ದೆಗಳಿಗೆ ಕೊಂಡೊಯ್ಯಲು ಶಿಕ್ಷಕರು ಶ್ರಮವಹಿಸಬೇಕೆಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕರ…