ಗುಣಮಟ್ಟದ ಹಾಲು ಉತ್ಪಾದಿಸಿ ಸಂಘ ಸರಬರಾಜು ಮಾಡಿ : ಶಿಮುಲ್ ಉಪಾಧ್ಯಕ್ಷ ಎಚ್ ಕೆ ಬಸಪ್ಪ
ವಿಜಯ ದರ್ಪಣ ನ್ಯೂಸ್, ದಾವಣಗೆರೆ ಜಿಲ್ಲೆ ಚನ್ನಗಿರಿ: ರೈತರು ಹೆಚ್ಚೆಚ್ಚು ಗುಣಮಟ್ಟದ ಹಾಲು ಉತ್ಪಾದಿಸಿ ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಳ್ಳಬೇಕೆಂದು ಶಿಮುಲ್ ಉಪಾಧ್ಯಕ್ಷ ಎಚ್.ಕೆ. ಬಸಪ್ಪ ಹೇಳಿದರು. ಅವರು ಚನ್ನಗಿರಿ ತಾಲ್ಲೂಕಿನ ಕಂಚುಗಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹೈನುಗಾರಿಕೆಯು ಪ್ರತಿಯೊಬ್ಬ ರೈತನ ಅವಿಭಾಜ್ಯ ಅಂಗವಾಗಿದ್ದು, ಹೆಚ್ಚು ಜಾನುವಾರುಗಳನ್ನು ಸಾಕುವ ಮೂಲಕ ಹಾಲನ್ನು ಹೆಚ್ಚು ಉತ್ಪಾದಿಸಿ ಆರ್ಥಿಕತೆ ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು. ಕಂಚುಗಾರನಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ಒಟ್ಟು…
