ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ: ಡಿಕೆ ಶಿವಕುಮಾರ್
ವಿಜಯ ದರ್ಪಣ ನ್ಯೂಸ್…. ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ: ಡಿಕೆ ಶಿವಕುಮಾರ್ ನೆಲಮಂಗಲ ಬೆಂ.ಗ್ರಾ ಜಿಲ್ಲೆ, ಜೂ.28: ಕೈಗಾರಿಕೆಗಳ, ಉದ್ಯಮಗಳ ಬೆಳವಣಿಗೆಗೆ ಹಾಗೂ ಉದ್ಯೋಗ ಸೃಷ್ಟಿಗೆ ಪೂರಕವಾದ ಎಲ್ಲ ರೀತಿಯ ಸಹಕಾರ ಮತ್ತು ನೆರವನ್ನು ನೀಡಲು ನಮ್ಮ ಸರ್ಕಾರ ಸದಾ ಸಿದ್ಧವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ) ವತಿಯಿಂದ ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯ ಅವ್ವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಿರುವ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ…