ಕರುನಾಡಿನ ಸಾಧಕರು ಸದಾ ಸ್ಮರಣೇಯರು
ವಿಜಯ ದರ್ಪಣ ನ್ಯೂಸ್… ಕರುನಾಡಿನ ಸಾಧಕರು ಸದಾ ಸ್ಮರಣೇಯರು ಇಂದು ಕನ್ನಡ ಸಾಹಿತ್ಯ ಲೋಕದ ಅನರ್ಘ್ಯರತ್ನ ಪು.ತಿ.ನ. ಅವರ ಜನುಮ ದಿನ. ಪುರೋಹಿತ ತಿರುನಾರಾಯಣ ಅಯ್ಯಂಗಾರ್ ನರಸಿಂಹಾಚಾರ್ ಅವರು ಮೇಲುಕೋಟೆಯಲ್ಲಿನ ವೈದಿಕ ಮನೆತನಕ್ಕೆ ಸೇರಿದವರು. ಅವರ ಹಿರಿಯರು ಕೆಲವು ಶತಮಾನಗಳ ಹಿಂದೆ ತಿರುವಳ್ಳೂರಿನಿಂದ ಮೇಲುಕೋಟೆಗೆ ಬಂದವರು. ವೇದ, ಉಪನಿಷತ್ತು, ಆಗಮ, ತರ್ಕ, ಪುರಾಣ ಮುಂತಾದ ಹತ್ತು ಹಲವು ಜ್ಞಾನ ಶಾಖೆಗಳಲ್ಲಿ ಪಾಂಡಿತ್ಯವನ್ನು ಸಂಪಾದಿಸಿದ್ದ ಶ್ರೀ ತಿರುನಾರಾಯಣ ಅಯ್ಯಂಗಾರ್ ಮತ್ತು ಗೊರೂರಿನ ಶ್ರೀರಂಗಮ್ಮ ಇವರ ಮೊದಲ ಮಗನಾಗಿ ಮಾರ್ಚ್…
