Editor VijayaDarpana

ಬದುಕಿನಲ್ಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ : ಪ್ರಣವಾನಂದಪುರಿ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…. ಬದುಕಿನಲ್ಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ : ಪ್ರಣವಾನಂದಪುರಿ ಸ್ವಾಮೀಜಿ ಶಿಡ್ಲಘಟ್ಟ : ಇರುವಷ್ಟು ಕಾಲ ಸಮಾಜಕ್ಕೆ ಒಳಿತು ಮಾಡುವ ನಿಟ್ಟಿನಲ್ಲಿ ಬದುಕು ಸಾಗಲಿ ಯಾರ ಬದುಕು ಶಾಶ್ವತವಲ್ಲ,ನಮ್ಮೆಲ್ಲರ ಬದುಕಿನಲ್ಲಿ ಗುರಿ ಇರಲಿ ಗುರಿ ಮುಟ್ಟಲು ಗುರುವಿನ ಮಾರ್ಗದರ್ಶನ ಇರಲಿ ಎಂದು ಶಿವನಾಪುರ ವಹ್ನಿಕುಲ ಶಕ್ತಿ ಪೀಠದ ಆದಿಶಕ್ತಿ ಮಹಾ ಸಂಸ್ಥಾನದ ಪ್ರಣವಾನಂದಪುರಿ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಜಂಗಮಕೋಟೆ ಶ್ರೀಧರ್ಮರಾಯಸ್ವಾಮಿ ದ್ರೌಪತಮ್ಮದೇವಿಯ 73ನೇ ವರ್ಷದ ಹೂವಿನ ಕರಗ ಮಹೋತ್ಸವ ಅಂಗವಾಗಿ ನಡೆದ…

Read More

ಕೊಳವೆಬಾವಿ ಕೊರೆಯಲು ನಿರಾಕ್ಷೇಪಣಾ ಪತ್ರ ಕಡ್ಡಾಯ: ಜಿಲ್ಲಾಧಿಕಾರಿ ಬಸವರಾಜು 

ವಿಜಯ ದರ್ಪಣ ನ್ಯೂಸ್…. ಕೊಳವೆಬಾವಿ ಕೊರೆಯಲು ನಿರಾಕ್ಷೇಪಣಾ ಪತ್ರ ಕಡ್ಡಾಯ: ಜಿಲ್ಲಾಧಿಕಾರಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 15: ಮಾರ್ಚ್ 2023ರ ಅಂತ್ಯದ ಅಂತರ್ಜಲ ಮೌಲೀಕರಣದ ವರದಿಯ ಪ್ರಕಾರ ಜಿಲ್ಲೆಯಲ್ಲಿರುವ ನಾಲ್ಕು ತಾಲ್ಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲ್ಲೂಕುಗಳೆಂದು ವರ್ಗೀಕರಿಸಲಾಗಿದ್ದು ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಕಡ್ಡಾಯವಾಗಿ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ…

Read More

ಹಿರಿಯ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ವಿಜಯ ದರ್ಪಣ ನ್ಯೂಸ್…. ಹಿರಿಯ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ ನಿಧನಕ್ಕೆ ಕೆಯುಡಬ್ಲ್ಯೂ ಜೆ ಸಂತಾಪ ಬೆಂಗಳೂರು: ಕನ್ನಡಪ್ರಭ, ಸಂಯುಕ್ತ ಕರ್ನಾಟಕ, ಪಬ್ಲಿಕ್ ಟಿವಿ, ಒನ್ ಇಂಡಿಯಾ ಸೇರಿದಂತೆ ಹಲವೆಡೆ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತರಾದ ಎಸ್.ಕೆ. ಶ್ಯಾಮಸುಂದರ್ (72) ಸೋಮವಾರ ರಾತ್ರಿ ನಿಧನರಾದರು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ಕ್ಷೀಣಿಸಿದ್ದರಿಂದ ಅವರು ಕೋಮಾಗೆ ಜಾರಿದ್ದರು. ಸತತವಾಗಿ ಚಿಕಿತ್ಸೆ ನೀಡಿದ್ದರೂ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಕೊನೆಯುಸಿರೆಳೆದಿದ್ದಾರೆ. ಚಾಮರಾಜಪೇಟೆ ಹಿಂದೂ…

Read More

ಎನ್ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ……

ವಿಜಯ ದರ್ಪಣ ನ್ಯೂಸ್….. ಎನ್ಕೌಂಟರ್, ಜಾತಿ ಜನಗಣತಿ, ವಕ್ಫ್ ತಿದ್ದುಪಡಿ…… ಈ ವಿಷಯಗಳ ಬಗ್ಗೆ ಒಂದು ನಿರ್ದಿಷ್ಟ, ಸ್ಪಷ್ಟ ತೀರ್ಮಾನ ಕೈಗೊಳ್ಳುವುದು ಅಷ್ಟು ಸುಲಭವಲ್ಲ. ಸಹಜವಾಗಿ ಆ ಕ್ಷಣದ ಸತ್ಯ ಅಥವಾ ಭಾವನಾತ್ಮಕತೆ ಅಥವಾ ಆಗಿನ ನಮ್ಮ ಮನಸ್ಥಿತಿ ಆಧಾರದ ಮೇಲೆ ಮೇಲ್ನೋಟಕ್ಕೆ ಒಂದು ತೀರ್ಪು ಕೊಡಬಹುದು. ಆದರೆ ಸಮಗ್ರವಾಗಿ, ಸಮಾಜದ ಒಟ್ಟು ಹಿತಾಸಕ್ತಿ, ವ್ಯವಸ್ಥೆಯ ವಾಸ್ತವತೆ, ದೇಶದ ದೂರದೃಷ್ಟಿಯ ಅನುಕೂಲತೆ ಎಲ್ಲವನ್ನೂ ನೋಡಿಕೊಂಡು ಇದು ಹೀಗೆ ಇರಬೇಕು ಎಂದು ತೀರ್ಮಾನ ಕೈಗೊಳ್ಳುವುದು ಒಂದು ಸಂಕುಚಿತ ಮನೋಭಾವಕ್ಕೆ…

Read More

ಡಾ. ಬಿ. ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು : ಸಚಿವ ಡಾ. ಎಂ ಸಿ ಸುಧಾಕರ್

ವಿಜಯ ದರ್ಪಣ ನ್ಯೂಸ್… ಡಾ. ಬಿ. ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳಬೇಕು : ಸಚಿವ ಡಾ. ಎಂ ಸಿ ಸುಧಾಕರ್ ಶಿಡ್ಲಘಟ್ಟ : ಜಗತ್ತಿನಲ್ಲಿನ ಅತ್ಯಂತ ಮೇಧಾವಿ ಎಂಬ ಖ್ಯಾತಿ ಪಡೆದಿರುವುದು ಡಾ.ಅಂಬೇಡ್ಕರ್ ಅವರು ಅಮೇರಿಕಾದ ಪ್ರತಿಷ್ಠಿತ ವಿಶ್ವ ವಿದ್ಯಾಲಯದಲ್ಲಿ ಇವರನ್ನು ಜಗತ್ತಿನ ಅತ್ಯಂತ ಪ್ರಭಾವಿ ಅರ್ಥಶಾಸ್ತ್ರಜ್ಞ, ಕಾನೂನು ಶಾಸ್ತ್ರಜ್ಞರೆಂದು ಪ್ರತಿಬಿಂಬಿಸಲಾಗಿದೆ ಎಂದು ಉನ್ನತ ಶಿಕ್ಷಣ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ರಾಷ್ಟಿಯ ಹಬ್ಬಗಳ ಆಚರಣಾ…

Read More

ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು:ಡಿಸಿಎಂ ಡಿ.ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್ ‌… ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು:ಡಿಸಿಎಂ ಡಿ.ಕೆ ಶಿವಕುಮಾರ್ ದೊಡ್ಡಬಳ್ಳಾಪುರ ಬೆಂ.ಗ್ರಾ.ಜಿಲ್ಲೆ, ಏಪ್ರಿಲ್ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ…

Read More

ಎಸ್ ಎಸ್ ಎಲ್ ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ

ವಿಜಯ ದರ್ಪಣ ನ್ಯೂಸ್….  ಎಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಬೆಂ.ಗ್ರಾ.ಜಿಲ್ಲೆ, ಏ.14 : ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕಳೆದ 2023-24 ನೇ ವರ್ಷದಲ್ಲಿ ಎಸೆಸೆಲ್ಸಿ ಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಯಿತು. ಜಿಲ್ಲೆಯ ನಾಲ್ಕು ತಾಲ್ಲೂಕಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯಂದು ಜಿಲ್ಲಾಧಿಕಾರಿ…

Read More

ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಶಿಕ್ಷಣ ಮತ್ತು ಜ್ಞಾನದಿಂದ ಸಮಾನತೆ ಕಾಣಬಹುದು ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಏ.14: ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗೋಣ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ…

Read More

*ಶಿಕ್ಷಣ ಮತ್ತು ಜ್ಞಾನದಿಂದ ಸಮಾನತೆ ಕಾಣಬಹುದು* *ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಮುನಿಯಪ್ಪ* ಬೆಂ.ಗ್ರಾ.ಜಿಲ್ಲೆ, ಏ.14(ಕರ್ನಾಟಕ ವಾರ್ತೆ): ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗೋಣ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 118 ನೇ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ ಕೊಟ್ಟಿರುವುದು ಭಾರತದ ಸಂವಿಧಾನ, ಅಂತಹ ಸಂವಿಧಾನ ಕೊಟ್ಟಿರುವುದು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು, ಶೋಷಿತರಿಗೆ, ಹಿಂದುಳಿದವರಿಗೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಬೇಕು. ಸರ್ವರು ಸ್ವಂತಂತ್ರರರು, ಸರ್ವರು ಸಮಾನರು, ಸರ್ವರಿಗೂ ಸಮಾನ ನ್ಯಾಯ, ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂಬ ತತ್ವದಡಿ ಸಂವಿಧಾನವನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದರು. ಸಂವಿಧಾನದಿಂದ ಕೇವಲ ಒಂದು ಜಾತಿ, ಸಮುದಾಯ, ವರ್ಗಕ್ಕೆ ಸೀಮಿತವಾಗಿಲ್ಲ, ಭಾರತದ ಕೊಟ್ಟು ಕಡೆಯ ಪ್ರಜೆಗೂ ಸಮಾನ ಅವಕಾಶ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಜ್ಞಾನ ವೃದ್ಧಿಯಿಂದ ಎಲ್ಲರಿಗೂ ಸಮಾನ ಅವಕಾಶ ಸಿಗುತ್ತದೆ ಎಂಬುದು ನನ್ನ ಭಾವನೆ ರಾಜ್ಯಾದ್ಯಾಂತ ಹೋಬಳಿವಾರು ವಸತಿ ಶಾಲೆ ಸ್ಥಾಪಿಸಲು 2014 ರ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯಲ್ಲಿ ವರದಿ ನೀಡಲಾಗಿತ್ತು, ಈಗ ವಸತಿ ಶಾಲೆಗಳು ಬಂದು ಬಡವರ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಸಹಕಾರಿಯಾಗಿದೆ ಮುಂದೆ ಪಂಚಾಯಿತಿ ವಾರು ವಸತಿ ಶಾಲೆ ನಿರ್ಮಿಸಲಾಗುವುದು ಎಂದರು. ಡಾ.ಬಿ.ಆರ್ ಅಂಬೇಡ್ಕರ್ ಅವರು ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರು ಇಬ್ಬರೂ ಕೂಡ ಸಾಕಷ್ಟು ಹೋರಾಟಗಳನ್ನು ನಡೆಸಿ, ಹಲವು ಸಮಸ್ಯೆಗಳನ್ನು ಎದುರಿಸಿ ದೇಶಕ್ಕೆ ಉತ್ತಮ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿಗಳಾಗಿದ್ದಾರೆ ಎಂದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಕೆ ಸುಧಾಕರ್ ಅವರು ಮಾತನಾಡಿ ಇಂದು ಪ್ರಪಂಚದಾದ್ಯಂತ ವಿಶ್ವದ ಜ್ಞಾನ ದಿನ ಎಂದು ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರ, ಇವತ್ತು ಇಬ್ಬರು ಮಹಾನ್ ನಾಯಕರುಗಳ ಜನುಮದಿನ ಜೊತೆಗೆ ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಜ್ಞಾನ ಇವುಗಳ ತತ್ವಗಳನ್ನು ಆಚರಣೆ ಮಾಡುವ ದಿನವಾಗಿದೆ. ಅಂಬೇಡ್ಕರ್ ಅವರ ಜೀವನವು ಬಹಳಷ್ಟು ಕಠಿಣವಾಗಿತ್ತು ಜಾತಿ ಪದ್ಧತಿ, ಶೋಷಣೆ, ನೋವು ಇವೆಲ್ಲವನ್ನೂ ಸಹಿಸಿಕೊಂಡು ದೇಶಕ್ಕೆ ಉತ್ತಮ ಸಂವಿಧಾನ ರಚಿಸಿದರು. ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್, ಕೊಲಂಬಿಯಾ ಯೂನಿವರ್ಸಿಟಿ ಅಲ್ಲಿ ಪಿ.ಹೆಚ್.ಡಿ ಪಡೆದ ಮೊದಲ ಭಾರತೀಯ, ಮಹಾನ್ ನಾಯಕರುಗಳ ಸಾಲಿನಲ್ಲಿದ್ದಾರೆ. ಹಾಗೆಯೇ ದೇಶದ ಮಾಜಿ ಉಪ ಪ್ರಧಾನ ಮಂತ್ರಿ ಗಳಾದ ಬಾಬು ಜಗಜೀವನರಾಂ ಅವರು ಹಸಿರು ಕ್ರಾಂತಿಯ ಹರಿಕಾರ ಈ ದೇಶದ ಪ್ರಧಾನಿ ಆಗಲು ಅವಕಾಶ ಹಾಗೂ ಅರ್ಹತೆ ಇದ್ದರೂ ಸಹ ಅದೃಷ್ಟ ಇರಲಿಲ್ಲ. ಶೋಷಿತರಿಗೆ ಅಲ್ಲ ಮೇಲ್ಪಂಕ್ತಿಗಳಿಗೂ ಸಮಾನ ಅವಕಾಶ, ಸೌಲಭ್ಯ ಸಿಗುವಂತಾಗಬೇಕು ಎಂಬ ಆಲೋಚನೆ ಹೊಂದಿದ್ದರು. ಇವರಿಬ್ಬರ ಜೀವನಶೈಲಿ, ತತ್ವಾದರ್ಶಗಳನ್ನು ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು. ನಂತರ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾಜ ಸಿ ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಉಪಾಧ್ಯಕ್ಷರಾದ ನಾರಾಯಣಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ತಹಶೀಲ್ದಾರ್ ಬಾಲಕೃಷ್ಣ ಇಒ ಶ್ರೀನಾಥ್ ಗೌಡ ಸೇರಿದಂತೆ ಸಂಘ ಸಂಸ್ಥೆಗಳ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯ ದರ್ಪಣ ನ್ಯೂಸ್…. ಶಿಕ್ಷಣ ಮತ್ತು ಜ್ಞಾನದಿಂದ ಸಮಾನತೆ ಕಾಣಬಹುದು ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಮುನಿಯಪ್ಪ *ಶಿಕ್ಷಣ ಮತ್ತು ಜ್ಞಾನದಿಂದ ಸಮಾನತೆ ಕಾಣಬಹುದು* *ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸಚಿವ ಮುನಿಯಪ್ಪ* ಬೆಂ.ಗ್ರಾ.ಜಿಲ್ಲೆ, ಏ.14(ಕರ್ನಾಟಕ ವಾರ್ತೆ): ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನದ ಆಶಯದೊಂದಿಗೆ ನಾವೆಲ್ಲರೂ ಮುಂದೆ ಸಾಗೋಣ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ…

Read More

ಡಾ. ಬಿ.ಆರ್. ಅಂಬೇಡ್ಕರ್ ಭವನದ ಗುದ್ದಲಿ ಪೂಜೆ ಹಾಗು ಜಯಂತಿ ಆಚರಣೆಗೆ ಸಕಲ ಸಿದ್ಧತೆ

ವಿಜಯ ದರ್ಪಣ ನ್ಯೂಸ್…. ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭವನದ ಗುದ್ದಲಿ ಪೂಜೆ ಹಾಗು ಜಯಂತಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವನದ ಗುದ್ದಲಿ ಪೂಜೆ ಹಾಗು ಜಯಂತಿಯನ್ನು ಏಪ್ರಿಲ್ -14 ರಂದು ಅದ್ಧೂರಿಯಾಗಿ ನಡೆಸಲು ತಾಲ್ಲೂಕು ಆಡಳಿತ ಸಕಲ ಸಿದ್ಧತೆಗಳನ್ನು ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಕೈಗೊಂಡಿದ್ದು ಶಾಸಕ ಬಿ.ಎನ್.ರವಿಕುಮಾರ್ ರವರು ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು…

Read More