ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆ ಆರಂಭ
ವಿಜಯ ದರ್ಪಣ ನ್ಯೂಸ್… ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆ ಆರಂಭ ಕರ್ನಾಟಕದ ಅಸ್ಮಿತೆಯ ಜಿಐ ಉತ್ಪನ್ನಗಳ ಮಾರಾಟ ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ…
