ಇಂದು ವಿಶ್ವ ಒಕ್ಕಲಿಗರ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಪಟ್ಟಾಭಿಷೇಕ
ವಿಜಯ ದರ್ಪಣ ನ್ಯೂಸ್…. ಇಂದು ವಿಶ್ವ ಒಕ್ಕಲಿಗರ ಮಠದ ಉತ್ತರಾಧಿಕಾರಿಯಾಗಿ ಡಾ.ಎಚ್.ಎಲ್.ನಾಗರಾಜು ಅವರಿಗೆ ಪಟ್ಟಾಭಿಷೇಕ ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ, ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿರುವ ಕೆಎಎಸ್ ಅಧಿಕಾರಿ 49 ವರ್ಷದ ಡಾ. ಎಚ್ಎಲ್ ನಾಗರಾಜ್ ಅವರನ್ನು ನೇಮಿಸಲಾಗಿದ್ದು, ಶನಿವಾರ (ಡಿಸೆಂಬರ್.14) ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು….