ಸರ್ಕಾರ ಪತ್ರಕರ್ತರ ಬೇಡಿಕೆ ಈಡೇರಿಸಲಿ : ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡರು
ವಿಜಯ ದರ್ಪಣ ನ್ಯೂಸ್ ಬೆಂಗಳೂರು : ರಾಜ್ಯದ ಪತ್ರಕರ್ತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವಾಗಿ ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯ ಮೂರ್ತಿಗಳಾದ ವಿ. ಗೋಪಾಲ ಗೌಡ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅವರು ಡಿಸೆಂಬರ್ 23ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಆಯೋಜಿಸಲಾದ `ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕøತಿಕ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ವನ್ನು ಉದ್ಘಾಟಿಸಿ ಮಾತನಾಡಿದರು. “ಪತ್ರಿಕಾರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ…