ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯಾಗಲು ಆರ್ಥಿಕ ಬಲ ಬೇಕು: ಬಯ್ಯಪ್ಪ ಅಧ್ಯಕ್ಷ ಶಾಂತಕುಮಾರ್
ವಿಜಯ ದರ್ಪಣ ನ್ಯೂಸ್… ಚನ್ನರಾಯಪಟ್ಟಣ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜುಲೈ 15: ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮ ಸಂಪನ್ಮೂಲ ಕ್ರೋಡೀಕರಣ ಮಾಡಿದರೆ ಅಭಿವೃದ್ಧಿ ಮಾಡಲು ಆರ್ಥಿಕ ಬಲ ದೊರೆಯುತ್ತದೆ ಎಂದು ಬಯಪ್ಪ ಅಧ್ಯಕ್ಷ ದ್ಯಾವರಹಳ್ಳಿ ಶಾಂತಕುಮಾರ್ ತಿಳಿಸಿದರು. ಅವರು ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ಕೇಂದ್ರದಲ್ಲಿ ಸೋಮವಾರ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ವಾಣಿಜ್ಯ ಅಂಗಡಿ ಮಳಿಗೆ ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಾಯಿತಿ ಅನುದಾನದಲ್ಲಿ 22.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ….