ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ ಸೂಚನೆ
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿಸೆಂಬರ್ 06:- ಬ್ರಹ್ಮರಥೋತ್ಸವ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ 2023-24ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಥೋತ್ಸವದಲ್ಲಿ ಹೆಚ್ಚಿನ ಪ್ರಮಾಣದ…