ಸಿಇಒ ಡಾ.ಕೆ.ಎನ್ ಅನುರಾಧ ಅವರಿಂದ ಕ್ಷೇತ್ರ ಸಂಚಾರ: ಕಾಮಗಾರಿಗಳ ಪರಿಶೀಲನೆ

ವಿಜಯ ದರ್ಪಣ ನ್ಯೂಸ್… ಸಿಇಒ ಡಾ.ಕೆ.ಎನ್ ಅನುರಾಧ ಅವರಿಂದ ಕ್ಷೇತ್ರ ಸಂಚಾರ: ವಿವಿಧ ಕಾಮಗಾರಿಗಳ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ ಎನ್ ರವರು ಇಂದು ದೇವನಹಳ್ಳಿ ತಾಲ್ಲೂಕಿನ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಂಚಾಯಿತಿಯ ಸಿಬ್ಬಂದಿಗಳು ಹಾಜರಾತಿ ಮತ್ತು ಕಡತಗಳನ್ನು ಪರಿಶೀಲಿಸಿದರು. ನಂತರ ದುದ್ದನಹಳ್ಳಿ ಗ್ರಾಮದ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2025-26 ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಹೊಸ ಕಾಮಗಾರಿಗಳ Pre-measurement ಮಾಡುವುದನ್ನು ನರೇಗಾ…

Read More

ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೈವಾರ ತಾತಯ್ಯನವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೈವಾರ ತಾತಯ್ಯನವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಮಾರ್ಚ್ 14 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಯೋಗಿ ನಾರೇಯಣರ ಯತೀಂದ್ರರ (ಕೈವಾರ ತಾತಯ್ಯ)’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ…

Read More

ದೌರ್ಜನ್ಯ ಪ್ರಕರಣಗಳಿಗೆ ನ್ಯಾಯ ದೊರಕಿಸುವುದು ಮುಖ್ಯ:ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಪ್ರಸಕ್ತ ವರ್ಷ 06 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ದೊರಕಿಸುವುದು ಮುಖ್ಯ:ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂ.ಗ್ರಾ.ಜಿಲ್, ಮಾ.14:- ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರದ ಜೊತೆಗೆ ಶೀಘ್ರ ನ್ಯಾಯ ದೊರಕಿಸುವುದು ಮುಖ್ಯ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಮೊದಲನೇ ತ್ರೈಮಾಸಿಕ…

Read More

ಜಿಲ್ಲಾಡಳಿತ ಭವನದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್  ಜಿಲ್ಲಾಡಳಿತ ಭವನದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ. ಮಾರ್ಚ್12 :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಜಗದ್ಗುರು ರೇಣುಕಾಚಾರ್ಯ’ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಜಗದ್ಗುರು ರೇಣುಕಾಚಾರ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ…

Read More

ವಿದ್ಯಾರ್ಥಿಗಳಲ್ಲಿ ಉದ್ಯಮ ಕೌಶಲ್ಯ ಅಭಿವೃದ್ಧಿ ಅಗತ್ಯ

ವಿಜಯ ದರ್ಪಣ ನ್ಯೂಸ್….. ವಿದ್ಯಾರ್ಥಿಗಳಲ್ಲಿ ಉದ್ಯಮ ಕೌಶಲ್ಯ ಅಭಿವೃದ್ಧಿ ಅಗತ್ಯ ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ನಂತರ ನಿರುದ್ಯೋಗಿಗಳಾಗಿ ಕುಟುಂಬ ಮತ್ತು ಸಮಾಜಕ್ಕೆ ಹೊರೆಯಾಗುವ ಬದಲು ಉದ್ಯಮ ಶೀಲತಾಭಿವೃದ್ಧಿಯ ಕೌಶಲಗಳನ್ನು ವೃದ್ಧಿಸಿಕೊಂಡು ಸ್ವಾವಲಂಬಿಗಳಾಗಬೇಕೆಂದು ಉದ್ಯಮ ಶೀಲತಾಭಿವೃದ್ಧಿ ಕೇಂದ್ರದ (ಸಿಡಾಕ್) ಸಂಪನ್ಮೂಲ ವ್ಯಕ್ತಿ ಕೆ. ಶಶಿಕುಮಾರ್ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಧಾರವಾಡದ ಸಿಡಾಕ್ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮೂರು ದಿನಗಳ ಉದ್ಯಮಶೀಲತಾಭಿವೃದ್ಧಿ ಅರಿವು…

Read More

ದೊಡ್ಡಬಳ್ಳಾಪುರ:ರಾಗಿ ಖರೀದಿ ಕೇಂದ್ರ ಸ್ಥಳಾಂತರ

ವಿಜಯ ದರ್ಪಣ ನ್ಯೂಸ್…. ದೊಡ್ಡಬಳ್ಳಾಪುರ:ರಾಗಿ ಖರೀದಿ ಕೇಂದ್ರ ಸ್ಥಳಾಂತರ ಬೆಂ.ಗ್ರಾ.ಜಿಲ್ಲೆ, ಮಾ.10: 2024-25ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಈಗಾಗಲೇ ನೋಂದಣಿಯಾದ ರೈತರಿಂದ ರಾಗಿಯನ್ನು ಖರೀದಿಸಲು ರಾಗಿ ಖರೀದಿ ಕೇಂದ್ರವನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಗೋದಾಮು, ಸರ್ಕಾರಿ ಆಸ್ಪತ್ರೆ ಹಿಂಭಾಗ, ಚಿಕ್ಕಬಳ್ಳಾಪುರ ರಸ್ತೆ, ದೊಡ್ಡಬಳ್ಳಾಪುರ ತಾಲ್ಲೂಕು ಇಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ. ದೊಡ್ಡಬಳ್ಳಾಪುರದ ನೊಂದಾಯಿತ ರೈತರು ಸ್ಥಳಾಂತರಿಸಲಾದ ರಾಗಿ ಖರೀದಿ ಕೇಂದ್ರದಲ್ಲಿ ರಾಗಿಯನ್ನು ತಂದು ಮಾರಾಟ…

Read More

ಮಕ್ಕಳ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಕೆ.ನಾಗಣ್ಣ ಗೌಡ

ವಿಜಯ ದರ್ಪಣ ನ್ಯೂಸ್….. ಮಕ್ಕಳ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಕೆ.ನಾಗಣ್ಣ ಗೌಡ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾ5 : ಮಕ್ಕಳು ದೇಶದ ಆಸ್ತಿ, ಮಕ್ಕಳ ಹಕ್ಕುಗಳ ಮೇಲಿನ ದೌರ್ಜನ್ಯ ಶಿಕ್ಷಾರ್ಹ ಅಪರಾಧವಾಗಿದ್ದು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ…

Read More

ಬಿಸಿಗಾಳಿ ಆತಂಕ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ

ವಿಜಯ ದರ್ಪಣ ನ್ಯೂಸ್…. ಬಿಸಿಗಾಳಿ ಆತಂಕ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸಮಸ್ಯೆ ಆಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.16 : ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದಲ್ಲಿ ಮುಂಬರುವ ದಿನಗಳಲ್ಲಿ ಬಿಸಿ ಗಾಳಿ (ಹೀಟ್ ವೇವ್) ಬೀಸುವ ಸಾಧ್ಯತೆ ಇರುವ ಕಾರಣ ಮಕ್ಕಳು ಸೇರಿದಂತೆ ಜನ- ಜಾನುವಾರುಗಳು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ…

Read More

ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಆರಂಭ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಆರಂಭ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಮಾ.03: ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ಮಾರ್ಚ್ 03 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…

Read More

ಹಕ್ಕಿ ಜ್ವರ ಭೀತಿ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಹಕ್ಕಿ ಜ್ವರ ಭೀತಿ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ28:-ಹಕ್ಕಿ ಜ್ವರವು ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕಂಡು ಬಂದಿದ್ದು, ಅಲ್ಲದೇ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಳಿಗಳು ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು. ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು…

Read More