ತಡಿಯಂಡಮೋಳು ಬೆಟ್ಟಕ್ಕೆ ಪ್ರವಾಸಕ್ಕೆ ಬಂದ ಯುವಕ ಹೃದಯಘಾತದಿಂದ ನಿಧನ.
ವಿಜಯ ದರ್ಪಣ ನ್ಯೂಸ್ ಮಡಿಕೇರಿ:ನಾಪೋಕ್ಲು ಬಳಿಯ ಕಕ್ಕಬ್ಬೆ ತಡಿಯಂಡಮೋಳು ಬೆಟ್ಟಕ್ಕೆ ಚಾರಣಕೆಂದು ತೆರಳಿದ ಯುವಕ ಹೃದಯಘಾತದಿಂದ ನಿಧನ ಹೊಂದಿದ ಘಟನೆ ಭಾನುವಾರ ನಡೆದಿದೆ. ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಬೆಂಗಳೂರಿನ ಜೆಪಿ ನಗರದ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜತಿನ್ ಕುಮಾರ್ ತನ್ನ 5 ಜನ ಸಹಯೋದ್ಯೋಗಿಗಳೊಂದಿಗೆ ಭಾನುವಾರ ಬೆಳಗ್ಗೆ ತಡಿಯಂಡಮೋಳು ಬೆಟ್ಟ ವೀಕ್ಷಣೆಗೆ ತೆರಳಿದ್ದರು. ಬೆಟ್ಟದ ಮೇಲೆ ತಲುಪಿದಾಗ ತೀವ್ರತರದ ಎದೆನೋವು ಕಾಣಿಸಿಕೊಂಡ ಬಳಿಕ ಜತಿನ್ ಕುಮಾರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ…
