ಭಾರತೀಯತೆ – ಹಿಂದುತ್ವ – ಹವ್ಯಕ ಸಮ್ಮೇಳನ…….
ವಿಜಯ ದರ್ಪಣ ನ್ಯೂಸ್… ಭಾರತೀಯತೆ – ಹಿಂದುತ್ವ – ಹವ್ಯಕ ಸಮ್ಮೇಳನ……. ಬರೆಯಬಾರದೆಂದಿದ್ದರೂ ಮನಸ್ಸು ತಡೆಯಲಿಲ್ಲ. ಸತ್ಯದ ಹುಡುಕಾಟದಲ್ಲಿ ನಿಂದನೆಗೆ ಒಳಗಾಗುವ ಸಾಧ್ಯತೆಯಿದ್ದರೂ ನಾವು ಕಂಡ ಸತ್ಯವನ್ನು, ನಮಗೆ ಅನಿಸಿದ ಅಭಿಪ್ರಾಯಗಳನ್ನು ಹೇಳಲೇಬೇಕಾಗುತ್ತದೆ…. ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹವ್ಯಕ ಮಹಾಸಭಾ ಕಾರ್ಯಕ್ರಮ ಮೂರು ದಿನ ಅದ್ದೂರಿಯಾಗಿ ನಡೆಯಿತು. ಎಷ್ಟೋ ಜಾತಿ ಸಮಾವೇಶಗಳ ರೀತಿ ಇದೂ ಸಹ ಒಂದು….. ಆದರೆ ಅಲ್ಲಿ ಭಾಗವಹಿಸಿದ್ದ ಮುಖ್ಯ ಅತಿಥಿಗಳು, ಸ್ವಾಮೀಜಿಗಳು, ಪತ್ರಕರ್ತರು, ಹಾಲಿ ನ್ಯಾಯಾಧೀಶರು, ಉದ್ಯಮಿಗಳು, ರಾಜಕಾರಣಿಗಳು, ಇತರ ವೃತ್ತಿಪರರು,…