ಹುಚ್ಚರ ಸಂತೆಯಲ್ಲಿ ನಿಂತು……
ವಿಜಯ ದರ್ಪಣ ನ್ಯೂಸ್…. ಹುಚ್ಚರ ಸಂತೆಯಲ್ಲಿ ನಿಂತು…… ಕಾಲ ಬದಲಾಗಿದೆ, ತಂತ್ರಜ್ಞಾನ ಅಭಿವೃದ್ಧಿ ಹೊಂದಿದೆ. ಜನರ ಬಾಯಿ ಮತ್ತು ಮನಸ್ಸು ದೊಡ್ಡದಾಗಿದೆ. ಜ್ಞಾನ ಅಪಾರವಾಗಿ ಬೆಳೆದು ಮೆದುಳಿನಿಂದ ಆಚೆ ಹೊರಚಾಚುತ್ತಿದೆ. ಆದ್ದರಿಂದ ಇನ್ನು ಮುಂದೆ ರಾಜ್ಯದಲ್ಲಿ ನಡೆಯುವ ಯಾವುದೇ ದೊಡ್ಡ ಅಪರಾಧಿಗಳಿಗೆ ಪೊಲೀಸ್ ತನಿಖೆಯಾಗಲಿ, ಸಿಐಡಿ, ಸಿಓಡಿ ತನಿಖೆಯಾಗಲಿ ಅಥವಾ ವಿಶೇಷ ತನಿಖಾ ತಂಡಗಳ ಅವಶ್ಯಕತೆಯೇ ಇಲ್ಲ. ಜೊತೆಗೆ ಅಪರಾಧಿಗಳನ್ನು ಶಿಕ್ಷಿಸಲು ನ್ಯಾಯಾಲಯಗಳ ಅವಶ್ಯಕತೆಯೂ ಇಲ್ಲ. ಏಕೆಂದರೆ ಅದು ತುಂಬಾ ತಡವಾಗಿ ತೀರ್ಪು ನೀಡುತ್ತದೆ ಮತ್ತು ಕಾನೂನುಗಳನ್ನು…