ಬದಲಾವಣೆ ಜಗದ ನಿಯಮ….
ವಿಜಯ ದರ್ಪಣ ನ್ಯೂಸ್… ಬದಲಾವಣೆ ಜಗದ ನಿಯಮ…. ಹೌದು ನಿಜ, ಆದರೆ ಅದರ ದಿಕ್ಕು ಪ್ರಗತಿಪರವಾದ ನಿಟ್ಟಿನಲ್ಲಿ ಸಾಗುವುದನ್ನು ನಾವು ಪ್ರಜ್ಞಾಪೂರ್ವಕವಾಗೀ ನಿರ್ದೇಶಿಸಬೇಕು. ಆಗ ಮಾತ್ರ ನಮ್ಮ ಸಮಾಜ ಅಭಿವೃದ್ಧಿಯ ದಿಕ್ಕಿನಲ್ಲಿ ಇದೆ ಎಂದು ಅರ್ಥ. ಆ ಹಿನ್ನೆಲೆಯಲ್ಲಿ ಈಗಿನ ಕೆಲವು ಬದಲಾವಣೆಗಳನ್ನು ಗಮನಿಸಿ……. ವಿಶಿಷ್ಟ ಕಾಲಘಟ್ಟದಲ್ಲಿ ನಾವು ನೀವು…….. ತುತ್ತು ಅನ್ನಕ್ಕಾಗಿ ಅಲೆದಾಡುತ್ತಾ, ಅನ್ನದ ಋಣ ಎಂದು ತಿನ್ನಲು ಕೊಟ್ಟವರಿಗೆ ವಂದಿಸುತ್ತಾ, ತಪ್ಪು ಮಾಡಿದರೆ ಅನ್ನವೇ ಸಿಗುವುದಿಲ್ಲ ಎನ್ನುವಷ್ಟು ಭಯ ಭಕ್ತಿ ತೋರಿಸುತ್ತಾ, ಅನ್ನದ ಪ್ರತಿ…
