ಜೀವ ಹೂವಾಗಿದೆ ಭಾವ ಜೇನಾಗಿದೆ : ಜಯಶ್ರೀ.ಜೆ.ಅಬ್ಬಿಗೇರಿ
ಲಹರಿ ಸಂಗಾತಿ ಜಯಶ್ರೀ.ಜೆ.ಅಬ್ಬಿಗೇರಿ ಜೀವ ಹೂವಾಗಿದೆ ಭಾವ ಜೇನಾಗಿದೆ . ಯ ಮನೋಜ, ಜೀವ ಭಾವ ಎರಡೂ ನಿನ್ನಲ್ಲಿ ಲೀನವಾಗಿ ಹೃದಯ ವೀಣೆ ಹಿತವಾದ ಸಂಗೀತ ಮಿಡಿಯುತಿದೆ. ನನ್ನೆದೆಯ ಮಿಡಿತದ ರಾಗ ನಿನ್ನೆದೆಯ ದನಿಯನ್ನು ಪ್ರತಿಧ್ವನಿಸುತಿದೆ. ಒಲವಿನ ಬಯಕೆಗಳು ನೂರಾರು ಪ್ರೇಮದ ಸವಿಗನಸುಗಳ ಆಗರವನ್ನೇ ಸೃಷ್ಟಿಸಿವೆ. ನಿನ್ನ ಬಿಟ್ಟು ಈ ಜೀವಕೆ ಜೀವದುಸಿರು ಕಲ್ಪಿಸಿಕೊಳ್ಳುವುದು ಅಸಾಧ್ಯವೇ ಸರಿ. ನಿನ್ನ ಕಂಡರೆ ಸಾಕು ಈ ತನು ಮನ ತನ್ನಿಂದ ತಾನೆ ಅರಳುವುವು ಕಣೋ. ನಿನ್ನಾಸರೆ ಒಂದಿದ್ದರೆ ಸಾಕು ಬದುಕೆಲ್ಲ…
