ಕೃಷಿ ಹೊಂಡದಲ್ಲಿ ಬಿದ್ದು ದಂಪತಿ ಸಾವು.

ವಿಜಯ ದರ್ಪಣ ನ್ಯೂಸ್, ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾ ಜಿಲ್ಲೆ. ಜುಲೈ 31  ಕೃಷಿ ಹೊಂಡದಲ್ಲಿ ಬಿದ್ದು ದಂಪತಿ ಮೃತಪಟ್ಟಿದ್ದಾರೆ.  ದೇವನಹಳ್ಳಿ ತಾಲೂಕಿನ ಬಿಜ್ಜವರ ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತರು. ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ಐದು ತಿಂಗಳ ಹಿಂದೆ ಮದುವೆಯಾಗಿದ್ದರು. ಐದು ದಿನಗಳ ಹಿಂದೆ ಬಿಜ್ಜವರದ ಸಂಬಂಧಿಕರ ಮನೆಗೆ ಬಂದಿದ್ದರು….

Read More

ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ ಆರ್ ಲತಾ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 23 ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸವನಹಳ್ಳಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಹಾಗೂ ಗಾಳಿಯಿಂದ ಉಂಟಾದ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ ಸೇರಿದಂತೆ ಕೃಷಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಪ್ರಖ್ಯಾತ ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ.

ಬೆಂಗಳೂರು. ಮೇ 19 ನಾರಾಯಣ ನೇತ್ರಾಲಯದ ಮುಖ್ಯಸ್ಥರು  ಪ್ರಖ್ಯಾತ ನೇತ್ರ ತಜ್ಞರಾದ ಡಾ.ಭುಜಂಗ ಶೆಟ್ಟಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ನಾರಾಯಣ ನೇತ್ರಾಲಯಕ್ಕೆ  ಬಂದು ರೋಗಿಗಳಿಗೆ ಡಾ. ಭುಜಂಗ ಶೆಟ್ಟಿ ಚಿಕಿತ್ಸೆ ನೀಡಿದ್ದರು. ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳಿದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ಅವರನ್ನು  ತಕ್ಷಣ ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ  ಡಾ.‌ಭುಜಂಗ ಶೆಟ್ಟಿ ನಿಧನರಾಗಿದ್ದಾರೆ.

Read More

ಜೂಜು ಅಡ್ಡೆ ಮೇಲೆ ಪೊಲೀಸರ ಮಿಂಚಿನ ದಾಳಿ : 6 ಮಂದಿ ಅಂದರ್

ವಿಜಯಪುರ: ಮೇ.19 ಜೂಜು ಆಡ್ಡೆ ಮೇಲೆ ವಿಜಯಪುರ ಪೋಲಿಸರ ಮಿಂಚಿನ ಕಾರ್ಯಚರಣೆ ನಡೆಸಿ 6 ಮಂದಿಯನ್ನು ಬಂಧಿಸಿ ಅವರಿಂದ 35,600 ರೂ ನಗದು ಮತ್ತು ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ  ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಿಜಯಪುರ ಟೌನ್  ಯಲುವಹಳ್ಳಿ ರಸ್ತೆಯ ಶ್ರೀ ಮುನೇಶ್ವರಸ್ವಾಮಿ ದೇವಾಲಯದ ಬಳಿ ವಿಜಯಪುರ ಪಟ್ಟಣದ ಇಂದಿರಾ ನಗರದ ನಿವಾಸಿಗಳು ಜೂಜು ಆಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 6 ಮಂದಿಯನ್ನು ಬಂದಿಸುವಲ್ಲಿ…

Read More