ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ
ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ ದೊಡ್ಡಬಳ್ಳಾಪುರ ಆಗಸ್ಟ್ 02 :ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡುವಂತೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲ್ಲೂಕಿಗೆ ಸಮೀಪದ ಫಾಕ್ಲಾನ್ ಐಫೋನ್ ತಯಾರಿಕಾ ಕಂಪನಿಯ ಸ್ಥಳೀಯ ಮುಖ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವೇದಿಕೆಯ ಮುಖಂಡ ಎ.ನಂಜಪ್ಪ ಮಾತನಾಡಿ, ‘ರಾಜ್ಯದಲ್ಲಿನ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಪಡೆದು ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದೆ ಕೈಗಾರಿಕೆಗಳಲ್ಲಿ ಕನ್ನಡಿಗರು ಎರಡನೇ ದರ್ಜೆ ನೌಕರಿಯನ್ನು ಪಡೆಯುವಂತಾಗಿರುವುದು ಖಂಡನೀಯ….
