ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಆನ್ ಲೈನ್ ನಲ್ಲಿ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ. ಶಿವಶಂಕರ್ ಕರೆ
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 11 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15 ರಂದು ಆಚರಿಸಲಾಗುತ್ತಿದ್ದು, ಸಂವಿಧಾನದ ತತ್ತ್ವ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೋಂದಾಯಿಸಿ ಕೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಕರೆ ನೀಡಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ…