ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಶೇಕಡ 100 ರಷ್ಟು ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ.
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 19: ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ…
