ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗೆ ಶ್ರಮಿಸಿದವರು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು
ವಿಜಯ ದರ್ಪಣ ನ್ಯೂಸ್, ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 10 ಕೆರೆ, ಕುಂಟೆ, ಕೋಟೆ, ಪೇಟೆಗಳನ್ನು ನಿರ್ಮಿಸಿದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲರ ಏಳಿಗೆಗೆ ಶ್ರಮಿಸಿದವರು. ಬೆಂಗಳೂರು ನಗರವು ವಿಶ್ವದಲ್ಲಿ ಹೆಸರು ಮಾಡಲು ಕಾರಣ ಎಂದರೆ ಅದು ನಾಡಪ್ರಭು ಕೆಂಪೇಗೌಡರ ಕೊಡುಗೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ…
