ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ
ವಿಜಯ ದರ್ಪಣ ನ್ಯೂಸ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ,(KUWJ) ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಬೆಂಗಳೂರು ಜನವರಿ 31: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರಶಸ್ತಿಗಳ ವಿವರ: 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)…