ಕೆರೆಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಣಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 02 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ … Read more

ಕಣ್ಣುಗಳು ಮಾರುಕಟ್ಟೆಯಲ್ಲಿ ಸಿಗುವುದಿಲ್ಲ, ಕಣ್ಣುಗಳ ದಾನ ಮಾಡುವುದರಿಂದ ಮಾತ್ರ ಅಂಧರಿಗೆ ಬೆಳಕು ನೀಡಲು ಸಾಧ್ಯ : ಡಾ. ಕಿರಣ ಪಾಟೀಲ

ವಿಜಯ ದರ್ಪಣ ನ್ಯೂಸ್                                   ಬೀದರ: – ಜೂನ್ – 02, ಭೀಕರ ರಸ್ತೆ ಅಪಘಾತಗಳಲ್ಲಿ ಅಥವಾ ಇನ್ನಿತರ ದುರಂತ ಘಟನೆಗಳಲ್ಲಿ ಕಣ್ಣುಗಳನ್ನು ಕಳೆದುಕೊಂಡವರಿಗೆ ಮತ್ತು ಹುಟ್ಟಿನಿಂದಲೇ ಅಂಧತ್ವರಾಗಿರುವವರಿಗೆ ಬೆಳಕು ಕೊಡಲು ಒಂದೇ ಒಂದು ದಾರಿ, ಅದುವೇ ಸ್ವಯಂ ಪ್ರೇರಿತ, ಮಹಾದಾನ ಮಾಡುವ ಶ್ರೇಷ್ಠದಾನ ನೇತ್ರದಾನದಿಂದಲೇ ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬ ನಾನರಿಕನು ಮಹತ್ವವನ್ನರಿತು ತಮ್ಮ ಮರಣಾನಂತರ … Read more

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ ಸಿದ್ದತೆ: ಜಿಲ್ಲಾಧಿಕಾರಿ ಆರ್ ಲತಾ.

ವಿಜಯ ದರ್ಣಣ ನ್ಯೂಸ್ ಜೂನ್ 01. ಬೆಂಗಳೂರು ಗ್ರಾಮಾಂತರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ದತಿಯ ವಿರೋಧಿ ದಿನಾಚರಣೆ”ಯನ್ನು 2023ರ ಜೂನ್ 12 ರಂದು ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು ಅವರು ದೇವನಹಳ್ಳಿ ತಾಲ್ಲೂಕಿನ … Read more

ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಮಾಜ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್.. ಜೂನ್ 01 ಬೆಂಗಳೂರು ಗ್ರಾಮಾಂತರ ಜಿಲ್ಲೆ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಉಪಾಧೀಕ್ಷಕರ ಕಚೇರಿ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ-1090 ಕೇಂದ್ರವನ್ನು ಪ್ರಾರಂಭಿಸಲು ಗೌರವಧನದ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು  ಸಮಾಜ ಸೇವಕರ ಒಂದು ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.  ಸಮಾಜ ಸೇವಕರ(ಕೌನ್ಸಿಲರ್) ಒಂದು ಹುದ್ದೆಗೆ, ಎಂ.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿರುವ, 21 … Read more

ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವುದು ನನ್ನ ಕರ್ತವ್ಯ: ಸಚಿವ ಮಧು ಬಂಗಾರಪ್ಪ.

ವಿಜಯ ದರ್ಪಣ ನ್ಯೂಸ್.
ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮೇ 31 .

ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಎಲ್ಲಾ ರೀತಿಯ ಸಹಕಾರ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಹೇಳಿದರು.

ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2023-2024 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿ ಅವರು ಮಾತನಾಡಿದರು.
ಶಾಲೆಯ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಿ ಮಾತನಾಡಿದ ಅವರು 2023-24 ನೇ ಸಾಲಿನ ಶಾಲಾ ಆರಂಭದ ದಿನ ಮಕ್ಕಳನ್ನು ಸ್ವಾಗತಿಸಿ, ಎಲ್ಲಾ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಬೇಕು. ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ನೆರೆಹೊರೆಯಲ್ಲಿ ಯಾರಾದರೂ ಶಿಕ್ಷಣ ವಂಚಿತ ಮಕ್ಕಳು ಕಂಡುಬಂದಲ್ಲಿ ನಿಮ್ಮ ಸ್ನೇಹಿತರೆಂದು ತಿಳಿದು ಅವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ಮಕ್ಕಳನ್ನು ಪ್ರೇರೇಪಿಸಿದರು ಹಾಗೂ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಶಿಕ್ಷಕರ, ಪೋಷಕರ ಸಹಕಾರ ಅಗತ್ಯ ಎಂದರು.

ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಹೆಚ್ಚಿನ ಒತ್ತು ನೀಡಲಾಗುವುದು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಸಮಸ್ಯೆ, ಗೊಂದಲ ಆಗದಂತೆ ಶಾಲಾ ಮಕ್ಕಳಿಗೆ ಆರಂಭದಲ್ಲಿ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಲು ಶೀಘ್ರ ಕ್ರಮ ವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ನಂತರ ಸಚಿವರು ಬಸವನಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಜಾಲಿಗೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಉಚಿತ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ವಿತರಿಸಿ ಮಕ್ಕಳಿಗೆ ಹೂ ನೀಡಿ ಶಾಲೆಗೆ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಪ್ರಾಥಮಿಕ ಶಿಕ್ಷಣ ನಿರ್ದೇಶಕ ಪ್ರಸನ್ನ ಕುಮಾರ್, ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ  ಶ್ರೀಕಂಠ.ಎನ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಬಿ.ಇ.ಒ ಸುಮಾ ಹಾಗೂ  ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

  1. Read more