ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್
ವಿಜಯ ದರ್ಪಣ ನ್ಯೂಸ್….. ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಶಿಡ್ಲಘಟ್ಟ : ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜಪ್ತಿಹೊಸಹಳ್ಳಿ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಿತ್ತಲಹಳ್ಳಿ ವೆಂಕಟೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. ಬಿಸಿಎಂ ಎ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಜಪ್ತಿಹೊಸಹಳ್ಳಿ ಪ್ರಕಾಶ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ,ಸಹಾಯಕರಾಗಿ ಪಿಡಿಓ ಕೆ. ಕಾತ್ಯಾಯಿನಿ ಕಾರ್ಯನಿರ್ವಹಿಸಿದರು. ಅಧ್ಯಕ್ಷರ … Read more
