ಮಳೆ ಕೊರತೆಯಿಂದ ಸೊರಗಿದ ಬೆಳೆ: ರೈತರ ನೋವಿಗೆ ಸ್ಪಂದಿಸಿದ ಸಚಿವ ಚಲುವರಾಯಸ್ವಾಮಿ

ವಿಜಯ ದರ್ಪಣ ನ್ಯೂಸ್…. ಮಳೆ ಕೊರತೆಯಿಂದ ಸೊರಗಿದ ಬೆಳೆ: ರೈತರ ನೋವಿಗೆ ಸ್ಪಂದಿಸಿದ ಸಚಿವ ಚಲುವರಾಯಸ್ವಾಮಿ   ಮಂಡ್ಯ, ಆಗಸ್ಟ್ 9.2026 ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಹಲಸಂದೆ, ಎಳ್ಳು ಸೇರಿದಂತೆ ಹಲವು ಬೆಳೆಗಳು ಸೊರಗಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ *ಎನ್. ಚಲುವರಾಯಸ್ವಾಮಿ* ಅವರು ಇಂದು ಮಂಡ್ಯ, ಕೆ.ಆರ್.ಪೇಟೆ ಮತ್ತು ಮಳವಳ್ಳಿ ತಾಲ್ಲೂಕುಗಳ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು. ಕೆ.ಆರ್.ಪೇಟೆ: ಸಿಂಧಘಟ್ಟ, ತೆಂಡೆಕೆರೆ ಗ್ರಾಮಗಳಲ್ಲಿ ಸ್ಥಳ ಪರಿಶೀಲನೆ ಕೆ.ಆರ್.ಪೇಟೆ ತಾಲ್ಲೂಕಿನ ಸಿಂಧಘಟ್ಟ ಮತ್ತು … Read more

ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರಧಾನ

ವಿಜಯ ದರ್ಪಣ ನ್ಯೂಸ್….. ಪತ್ರಕರ್ತ ಉದಯಕುಮಾರ್ ಅವರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ  ಬೆಂಗಳೂರು:ಪ್ರಜಾವಾಣಿ ಪತ್ರಿಕೆಯಲ್ಲಿ ಹನ್ನೆರಡು ವರ್ಷಗಳ ಕಾಲ ಸಹಾಯಕ ಸಂಪಾದಕರಾಗಿ ಪತ್ರಿಕೋದ್ಯಮ ಸೇವೆ ಸಲ್ಲಿಸಿದ್ದ ಉದಯಕುಮಾರ್ ರವರಿಗೆ  ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಜಾವಾಣಿಯ ಪತ್ರಿಕೆಯ ಖಾದ್ರಿ ಶಾಮಣ್ಣ ಟ್ರಸ್ಟ್ ನವರ ವತಿಯಿಂದ ಅವರ ಹೆಸರಿನ ಪ್ರಶಸ್ತಿ ನೀಡಿ ಗೌರವಿಸಿದರು. ಸಭಾಂಗಣದಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಹಿಂದಿನಿಂದಲೂ ಕೆಲಸ ಮಾಡಿದ್ದ ಮತ್ತು ಅವರ ಜೊತೆಯಲ್ಲಿ ಕೆಲಸ ಮಾಡಿದ್ದ ಎಲ್ಲರೂ ಸೇರಿ ಬೇರೆ ಪತ್ರಿಕೆಯ ಸಂಪಾದಕರು ಮತ್ತು ಹಿರಿಯ ಪತ್ರಕರ್ತರು … Read more

ದೇವರನ್ನು ದೇವಮಾನವರಲ್ಲಿ ಕಾಣಬಹುದು ಮೋಹನ್ ಕುಮಾರ್

ವಿಜಯ ದರ್ಪಣ ನ್ಯೂಸ್…. ದೇವರನ್ನು ದೇವಮಾನವರಲ್ಲಿ ಕಾಣಬಹುದು ಮೋಹನ್ ಕುಮಾರ್ ದೇವನಹಳ್ಳಿ ತಾಲ್ಲೂಕು: ದೇವರನ್ನು ಮನುಷ್ಯರ ರೂಪದಲ್ಲಿ ಕಾಣಬಹುದು. ಉದಾಹರಣೆಗೆ ಜಗಜ್ಯೋತಿ ಅಕ್ಕಮಹಾದೇವಿ ಬಸವಣ್ಣ ಕೈವಾರ ತಾತಯ್ಯ ವೀರ ಬ್ರಹ್ಮೇಂದ್ರ ವೇಮಣ್ಣ ಕಲಿಯುಗ ಬಸವಣ್ಣ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ತಮ್ಮ ತತ್ವಗಳ ಆಧಾರದ ಮೇಲೆ ದೇವಮಾನವರಾದರು ಎಂದು ರೋಟರಿ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್ ತಿಳಿಸಿದರು. ವಿಜಯಪುರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ಧ ಅರ್ಜುನ ನಿರ್ಮಿತ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯ ಆವರಣದಲ್ಲಿ ಶ್ರೀ ಚೆನ್ನಕೇಶವ ಸ್ವಾಮಿ … Read more

ಹಿತ್ತಲಹಳ್ಳಿ ಗ್ರಾಮದಲ್ಲಿ 30 ವರ್ಷಗಳ ಬಳಿಕ ನಡೆದ ಗ್ರಾಮದೇವತೆಗಳ ಜಾತ್ರಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್…. ಹಿತ್ತಲಹಳ್ಳಿ ಗ್ರಾಮದಲ್ಲಿ 30 ವರ್ಷಗಳ ಬಳಿಕ ನಡೆದ ಗ್ರಾಮದೇವತೆಗಳ ಜಾತ್ರಾ ಮಹೋತ್ಸವ ಶಿಡ್ಲಘಟ್ಟ : ಗ್ರಾಮದಲ್ಲಿ 30 ವರ್ಷಗಳ ಬಳಿಕ ಗ್ರಾಮದೇವತೆಗಳ ಜಾತ್ರಾ ಮಹೋತ್ಸವ ಹಾಗೂ ತಂಬಿಟ್ಟಿನ ದೀಪೋತ್ಸವ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ನಡೆಯಿತು ,ಗ್ರಾಮದ ಊರಬಾಗಿಲಿನಿಂದ ಆರಂಭವಾದ ಮೆರವಣಿಗೆ ಪ್ರಮುಖ ಬೀದಿಗಳ ಮೂಲಕ ದೇವಾಲಯಗಳಿಗೆ ತಲುಪಿ, ದೀಪ ಬೆಳಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಭಕ್ತರು ಜಯಘೋಷ ಮೊಳಗಿಸಿ ದೇವಿಯ ನಾಮಸ್ಮರಣೆ ಮಾಡಿದರು. ಗ್ರಾಮದ ಪ್ರತಿಯೊಂದು ಕುಟುಂಬವೂ ಜಾತಿ-ಬೇಧ … Read more

ಕನಕನಗರದಲ್ಲಿರುವ ಗರುಡಾದ್ರಿ ಇಂಗ್ಲಿಷ್ ಪಬ್ಲಿಕ್ ಶಾಲೆಯ ರಸ್ತೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಸ್ಥಳೀಯರಿಂದ ಒತ್ತಾಯ 

ವಿಜಯ ದರ್ಪಣ ನ್ಯೂಸ್…. ಕನಕನಗರದಲ್ಲಿರುವ ಗರುಡಾದ್ರಿ ಇಂಗ್ಲಿಷ್ ಪಬ್ಲಿಕ್ ಶಾಲೆಯ ರಸ್ತೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಸ್ಥಳೀಯರಿಂದ ಒತ್ತಾಯ  ಶಿಡ್ಲಘಟ್ಟ : ಕನಕ ನಗರದಲ್ಲಿ ಯುಜಿಡಿ ಅಳವಡಿಸಲು ಸಂಪೂರ್ಣ ಅಗೆದು ಹಾಕಲಾಗಿದ್ದು, ಇತ್ತೀಚಿಗೆ ಮಳೆ ಬಿದ್ದು ಕಾರಣ ಈ ಸ್ಥಿತಿ ಮುಂದುವರಿದಿದೆ ಮಳೆಯಿಂದಾಗಿ ಇಡೀ ರಸ್ತೆ ಕೆಸರುಮಯವಾಗಿ, ವಾಹನಗಳಿರಲಿ ಕಾಲ್ನಡಿಗೆಯಲ್ಲಿ ಸಾಗುವುದೂ ದುಸ್ತರವಾಗಿದೆ, ಈಗಾಗಲೇ ಮೂರ್ನಾಲ್ಕು ಮಕ್ಕಳು ಹಾಗೂ ಪೋಷಕರು ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ. ನಗರದ ಕನಕನಗರದಲ್ಲಿರುವ ಗರುಡಾದ್ರಿ ಇಂಗ್ಲಿಷ್ ಪಬ್ಲಿಕ್ ಶಾಲೆಯ ಮುಂಭಾಗದ … Read more

ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ……..

ವಿಜಯ ದರ್ಪಣ ನ್ಯೂಸ್… ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…… ( ಆಗಸ್ಟ್ 7 ) ಅಷ್ಟು ಸುಲಭವಲ್ಲ ಪ್ರೀತಿಗೆ ಪ್ರತಿ ವಂದನೆ ಹೇಳುವುದು……… ಯಾರಾದರೂ ನಮ್ಮನ್ನು ಟೀಕಿಸಿದರೆ, ನಿಂದಿಸಿದರೆ, ಹೊಡೆದರೆ ನಾವು ಅದಕ್ಕೆ ಒಂದಷ್ಟು ನಮ್ಮ ಮಿತಿಯಲ್ಲಿ ಅದೇ ರೀತಿ ಪ್ರತಿಕ್ರಿಯಿಸಬಹುದು ಅಥವಾ ನಿರ್ಲಕ್ಷಿಸಬಹುದು. ಆದರೆ ಪ್ರೀತಿ ಅಭಿಮಾನದ ನುಡಿಗಳಿಗೆ ಪ್ರತಿ ವಂದನೆ ತುಂಬಾ ಕಷ್ಟ. ಅಕ್ಷರಗಳಿಗೆ ನಿಲುಕದ ಭಾವವದು. ಮಾನವೀಯ ಮೌಲ್ಯಗಳ ಪುನರುತ್ಥಾನದ ಕನಸಿನ ಯಾತ್ರೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಾರಂಭಿಸಿ ಮುಂದೆ ಅದರ ಸಹಾಯದಿಂದಲೇ … Read more

ನಿಮ್ಮ ಮನೆ, ದೇವಾಲಯ ಕಾಪಾಡಿಕೊಂಡಂತೆ, ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

ವಿಜಯ ದರ್ಪಣ ನ್ಯೂಸ್… ನಿಮ್ಮ ಮನೆ, ದೇವಾಲಯ ಕಾಪಾಡಿಕೊಂಡಂತೆ, ನುಡಿದಂತೆ ನಡೆಯುವ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ: ಅರ್ಚಕರಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ ಬೆಂಗಳೂರು : “ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಬೇರೆ ಯಾವ ಸರ್ಕಾರಗಳು ಮಾಡದ ಕೆಲಸ ಮಾಡಿ ನಿಮ್ಮ ಹೃದಯ ಗೆದ್ದಿದ್ದೇವೆ. ನೀವುಗಳು ನಿಮ್ಮ ಮನೆ, ದೇವಾಲಯಗಳನ್ನು ಕಾಪಾಡಿಕೊಳ್ಳುವಂತೆ ನಿಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಅರ್ಚಕರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಆರ್ಚಕರ … Read more

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ವಿಕಲಚೇತನರ ಕುಂದು ಕೊರತೆ ಸಭೆ

ವಿಜಯ ದರ್ಪಣ ನ್ಯೂಸ್… ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ವಿಕಲಚೇತನರ ಕುಂದು ಕೊರತೆ ಸಭೆ ತಾಂಡವಪುರ ಆಗಸ್ಟ್ 8 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಂಚಾಯಿತಿ ವ್ಯಾಪ್ತಿಯ ವಿಕಲಚೇತನರ ಕುಂದು ಕೊರತೆ ಸಭೆಯನ್ನು ನಡೆಸಲಾಯಿತು ಸಭೆಯಲ್ಲಿ ಭಾಗವಹಿಸಿದ ವಿಕಲಚೇತನರು ಮತ್ತು ಪೋಷಕರು ಸರಕಾರದಿಂದ ವಿಕಲ ಚೇತನರಿಗೆ ಸಿಗುವಂತಹ ಪಿಂಚಣಿ ಮತ್ತು ಸರ್ಕಾರ ಸೌಲಭ್ಯಗಳು ಇನ್ನು ಹೆಚ್ಚಾಗಿ ಸಿಗಬೇಕು ಆಗಿದ್ದಾಗ ಮಾತ್ರ ವಿಕಲಚೇತನರಿಗೆ … Read more

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಿಂದ ಬರ ಪರಿಸ್ಥಿತಿ ಪರಿಶೀಲನೆ 

ವಿಜಯ ದರ್ಪಣ ನ್ಯೂಸ್…..  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಿಂದ ಬರ ಪರಿಸ್ಥಿತಿ ಪರಿಶೀಲನೆ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.07 : ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ … Read more

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಅವೈಜ್ಞಾನಿಕವಾಗಿ ಕೂಡಿದೆ 

ವಿಜಯ ದರ್ಪಣ ನ್ಯೂಸ್…. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಅವೈಜ್ಞಾನಿಕವಾಗಿ  ಕೂಡಿದೆ  ಶಿಡ್ಲಘಟ್ಟ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಅವೈಜ್ಞಾನಿಕ ಹಾಗು ಅಸಂವಿದಾನಿಕವಾಗಿ ಕೂಡಿದೆ,ಈ ಹಿಂದೆ ಬಿಹಾರ ಹಾಗು ಪಶ್ಚಿಮ ಬಂಗಾಳದಲ್ಲಿ ನಡೆದಂತಹ ಅವಾಂತರಗಳು ರಾಜ್ಯದಲ್ಲಿಯೂ ಸೃಷ್ಟಿಯಾಗುತ್ತದೆ ಎಂಬುದನ್ನು ನಮ್ಮ ಸಂಘಟನೆ ನಿರಂತರ ಎಚ್ಚರಿಸುತ್ತಾ ಬಂದಿದ್ದರೂ ಎಸ್‌ಐಆರ್ ಪ್ರಕ್ರಿಯೆಯ ಹೆಸರಲ್ಲಿ ರಾಜ್ಯದ ೧ ಕೋಟಿ ಜೀವಂತ ಮತದಾರರನ್ನು ಡಿಲೀಟ್ ಮಾಡಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾ ನಾಗರೀಕ … Read more