ಹೂವಿನ ತೋಟಕ್ಕೆ ನುಗ್ಗಿ ಕವರ್ ಕತ್ತರಿಸಿರಿವ ದುಷ್ಕರ್ಮಿಗಳು

ವಿಜಯ ದರ್ಪಣ ನ್ಯೂಸ್…. ಹೂವಿನ ತೋಟಕ್ಕೆ ನುಗ್ಗಿ ಕವರ್ ಕತ್ತರಿಸಿರುವ ದುಷ್ಕರ್ಮಿಗಳು ಶಿಡ್ಲಘಟ್ಟ : “ಬಿ” ವೈಟ್ ಹೂವಿನ ತೋಟಕ್ಕೆ ನುಗ್ಗಿದ ದುಷ್ಕರ್ಮಿಗಳು ಸುಮಾರು 10ಕ್ಕೂ ಹೆಚ್ಚು ಸಾಲುಗಳ ಉದ್ದದ ಕವರ್ ಗಳನ್ನು ಕತ್ತರಿಸಿ ತುಂಡು ಮಾಡಿದ್ದಾರೆ ಸದ್ಯ ಮಳೆ ಬಾರದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ ಮಳೆ ಬಂದಿದ್ದರೆ ಕಟಾವಿಗೆ ಬಂದಿದ್ದ ಹೂವು ಸಂಪೂರ್ಣ ಹಾಳಾಗಿ, ಲಕ್ಷಾಂತರ ರೂಪಾಯಿ ನಷ್ಟವಾಗುವ ಸಾಧ್ಯತೆ ಇತ್ತು ಎಂದು ರೈತ ಜಿ.ಎಂ.ಸುಧಾಕರ್ ತಿಳಿಸಿದ್ದಾರೆ. ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ … Read more

ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ವಿಜಯ ದರ್ಪಣ ನ್ಯೂಸ್….. ಹೊಸಕೋಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.12; ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಜಾ ಸೇವಾ ಆಂದೋಲನದ ಭಾಗವಾಗಿ ಇಂದು ತಾಲ್ಲೂಕು ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಹೊಸಕೋಟೆ ಟೌನ್ ನ ಯಾದವ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ … Read more

ಬದಲಿ ಕೃಷಿ ಕ್ರಾಂತಿ: “ದೃಢ ಕರ್ನಾಟಕ ಸಂಕಲ್ಪ” ದಡಿ ಸಾಗುತ್ತಿದೆ ಪ್ರಗತಿಯ ರಥ

ವಿಜಯ ದರ್ಪಣ ನ್ಯೂಸ್…. ಬದಲಿ ಕೃಷಿ ಕ್ರಾಂತಿ: “ದೃಢ ಕರ್ನಾಟಕ ಸಂಕಲ್ಪ” ದಡಿ ಸಾಗುತ್ತಿದೆ ಪ್ರಗತಿಯ ರಥ – ಭೂಮಿ, ನೀರು ಮತ್ತು ತಂತ್ರಜ್ಞಾನದ ಸಂಗಮ: ಸರ್ಕಾರದ ನೂರು ದಿನಗಳ ಪಯಣದಲ್ಲಿ ಅನ್ನದಾತನ ಬದುಕಿಗೆ ಹೊಸ ಭರವಸೆ – ನೇಗಿಲ ಯೋಗಿಯಿಂದ ಡಿಜಿಟಲ್ ಮಿಷನ್‌ವರೆಗೆ: ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸುತ್ತಿರುವ ದೃಢ ಸರ್ಕಾರದ ನೂತನ ಉಪಕ್ರಮಗಳು *”ಉಳುವ ಯೋಗಿಯ ನೋಡಲ್ಲಿ”* ಎಂಬ ಮಾತಿನಂತೆ ರೈತ ದೇಶದ ಬೆನ್ನೆಲುಬು. ಮಾನವಕುಲಕ್ಕೆ ಅನ್ನ ನೀಡುವ ರೈತ ಕೇವಲ ಜೀವನಾಧಾರವಲ್ಲ, … Read more

ಭಾವಲಹರಿ….

ವಿಜಯ ದರ್ಪಣ ನ್ಯೂಸ್….. ಭಾವಲಹರಿ…. ಒಮ್ಮೊಮ್ಮೆ ಸಂತಸ ಉಕ್ಕಿ ಹರಿಯುತ್ತದೆ, ಇನ್ನೊಮ್ಮೆ ದುಃಖದ ಕಟ್ಟೆ ಒಡೆಯುತ್ತದೆ, ಮತ್ತೊಮ್ಮೆ ಉತ್ಸಾಹ ಚಿಮ್ಮುತ್ತದೆ, ಮಗದೊಮ್ಮೆ ನಿರಾಸೆ ಕಾಡುತ್ತದೆ, ಆಗೊಮ್ಮೆ ಸಾಧಿಸುವ ಛಲ ಮೂಡುತ್ತದೆ, ಈಗೊಮ್ಮೆ ವಿಫಲತೆಯ ಭಯವಾಗುತ್ತದೆ. ಅಲ್ಲೊಮ್ಮೆ ಭರವಸೆಯ ಗೆರೆ ಕಾಣುತ್ತದೆ, ಇಲ್ಲೊಮ್ಮೆ ಆ ಸಾಧ್ಯತೆಯೇ ಕ್ಷೀಣಿಸುತ್ತದೆ, ಮುಂದೊಮ್ಮೆ ಭವ್ಯ ಭವಿಷ್ಯದ ಕನಸು ಕಟ್ಟುತ್ತದೆ, ಹಿಂದೊಮ್ಮೆ ಪ್ರಪಾತಕ್ಕೆ ಬಿದ್ದ ನೆನಪುಗಳು ತಟ್ಟುತ್ತವೆ, ಎಲ್ಲೋ ಒಮ್ಮೆ ಆಕ್ರೋಶ ಘರ್ಜಿಸುತ್ತದೆ, ಎಂದೋ ಒಮ್ಮೆ ತಾಳ್ಮೆ ಮೆರೆಯುತ್ತದೆ, ಮೇಲೊಮ್ಮೆ ಮನಸ್ಸು ವಿಹರಿಸುತ್ತದೆ, ಕೆಳಗೊಮ್ಮೆ … Read more

ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು……….‌‌

ವಿಜಯ ದರ್ಪಣ ನ್ಯೂಸ್…. ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು……….‌‌ ಹೃದಯದ ಸ್ನೇಹಿತ ಗಣೇಶ, ಹೇಗಿದ್ದೀಯಾ ? ನಿನ್ನ ಹೊಟ್ಟೆ ನೋಡಿದರೆ ತುಂಬಾ ಆರಾಮವಾಗಿ ಇರಲೇಬೇಕು ಅನಿಸುತ್ತಿದೆ. ನಿನಗೇನು ಕಡಿಮೆ ಗೆಳೆಯ, 100 ಕೋಟಿಗೂ ಹೆಚ್ಚು ಜನ ಪ್ರತಿನಿತ್ಯ ಭಕ್ಷ್ಯಬೋಜನಗಳನ್ನು ಉಣಬಡಿಸುತ್ತಾರೆ. ವರ್ಷಕ್ಕೊಮ್ಮೆ ನಿನ್ನನ್ನು ಹಾಡಿ ಹೊಗಳಿ ಬೀದಿಬೀದಿಗಳಲ್ಲಿ ಕುಣಿದು ಕುಪ್ಪಳಿಸುತ್ತಾರೆ. ನೀನು ಅದರಲ್ಲಿ ಮೈಮರೆತು ನಮ್ಮನ್ನು ಮರೆತಿರಬಹುದು. ಅದನ್ನು ನೆನಪಿಸುವ ಸಲುವಾಗಿಯೇ ಮತ್ತು ಇಲ್ಲಿನ ನಿಜ ಸ್ಥಿತಿ ನಿನಗೆ … Read more

ಸುಂಟಿಕೊಪ್ಪದಲ್ಲಿ ಮನಕಲಕುವ ದುರಂತ: ಪೋಷಕರ ಮಡಿಲು ಖಾಲಿ ಮಾಡಿದ ಅಪಘಾತ

ವಿಜಯ ದರ್ಪಣ ನ್ಯೂಸ್… ಬಸ್ ಡಿಕ್ಕಿ: 7 ವರ್ಷದ ಬಾಲಕಿ ಮೃತ್ಯು ಸುಂಟಿಕೊಪ್ಪದಲ್ಲಿ ಮನಕಲಕುವ ದುರಂತ: ಪೋಷಕರ ಮಡಿಲು ಖಾಲಿ ಮಾಡಿದ ಅಪಘಾತ ಮಡಿಕೇರಿ: ಸುಂಟಿಕೊಪ್ಪದ KEB ಸಮೀಪ ಇಂದು ಬೆಳಿಗ್ಗೆ ಸುಮಾರು 11.45ರ ವೇಳೆಗೆ ಸಂಭವಿಸಿದ ಹೃದಯವಿದ್ರಾವಕ ರಸ್ತೆ ಅಪಘಾತದಲ್ಲಿ ಅಸ್ಸಾಂ ಮೂಲದ ಕೂಲಿ ಕಾರ್ಮಿಕ ದಂಪತಿಯ 7 ವರ್ಷದ ಪುತ್ರಿ KSRTC ಬಸ್ ಡಿಕ್ಕಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ ಮೂಲತಃ ಅಸ್ಸಾಂ ರಾಜ್ಯದವರಾದ ಸಿರಾಜು ರೆಹಮಾನ್ ಮತ್ತು ಜಹನಾರ್ ದಂಪತಿ ಕೂಲಿ ಕೆಲಸಕ್ಕಾಗಿ ಸುಂಟಿಕೊಪ್ಪಕ್ಕೆ … Read more

ಕೆ.ಮುತ್ತುಗದಹಳ್ಳಿಯಲ್ಲಿ ಸರ್ಕಾರಿ ಸಾರಿಗೆ ಬಸ್ ಗಳನ್ನು ತಡೆದು ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ 

ವಿಜಯ ದರ್ಪಣ ನ್ಯೂಸ್…… ಕೆ.ಮುತ್ತುಗದಹಳ್ಳಿಯಲ್ಲಿ ಸರ್ಕಾರಿ ಸಾರಿಗೆ ಬಸ್ ಗಳನ್ನು ತಡೆದು ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ  ಶಿಡ್ಲಘಟ್ಟ : ತಾಲ್ಲೂಕಿನ ಕೆ.ಮುತ್ತುಕದಹಳ್ಳಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಚಿಂತಾಮಣಿ ತಾಲ್ಲೂಕಿನ ಜಂಗಮಶೀಗೆಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಕೆಲ ಗ್ರಾಮಸ್ಥರು ತಡೆದು ತಮ್ಮ ಗ್ರಾಮಕ್ಕೆ ಬೆಳಗಿನ ಸಮಯದಲ್ಲಿ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಪ್ರತಿದಿನ ಬೆಳಗ್ಗೆ 7 ಗಂಟೆಗೆ ಶಿಡ್ಲಘಟ್ಟದಿಂದ-ಕನ್ನಮಂಗಲ ಗ್ರಾಮಕ್ಕೆ ತೆರಳುವ ಬಸ್ಸನ್ನು ಜಂಗಮಶೀಗೆಹಳ್ಳಿ ಗ್ರಾಮದವರೆಗೆ ವಿಸ್ತರಿಸಬೇಕು ಎಂದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿತ್ತು ,ಬೆಳಗಿನ … Read more

ಕೊಡಗು ಜಿಲ್ಲೆಯಾದ್ಯಂತ ‘ಪ್ರೆಶರ್ ಮಿಡ್’ ಧ್ವನಿವರ್ಧಕ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ವಿಜಯ ದರ್ಪಣ ನ್ಯೂಸ್…. ಕೊಡಗು ಜಿಲ್ಲೆಯಾದ್ಯಂತ ‘ಪ್ರೆಶರ್ ಮಿಡ್’ ಧ್ವನಿವರ್ಧಕ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ​ ಮಡಿಕೇರಿ: ಮುಂಬರುವ ಗೌರಿ-ಗಣೇಶ ಮತ್ತು ವಿಜಯದಶಮಿ (ದಸರಾ) ಸೇರಿದಂತೆ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಧ್ವನಿವರ್ಧಕಗಳಲ್ಲಿ ‘ಪ್ರೆಶರ್ ಮಿಡ್’ (Pressure Mid) ಅಳವಡಿಸುವುದು ಹಾಗೂ ಅಂತಹ ಧ್ವನಿವರ್ಧಕಗಳನ್ನು ಬಳಿಸುವುದನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್‌.ಜೆ. ಅವರು ಈ ಕುರಿತು ಅಧಿಕೃತ ಆದೇಶ (ಸಂಖ್ಯೆ: ಎಂಎಜಿ/ಇತರೆ/38/2026-27) ಹೊರಡಿಸಿದ್ದಾರೆ. … Read more

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯ ದರ್ಪಣ ನ್ಯೂಸ್….. ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.11: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಅವರು ಕರೆ ನೀಡಿದ್ದಾರೆ. ಇಂದು … Read more

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ವಿಜಯ ದರ್ಪಣ ನ್ಯೂಸ್…. ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ ವಿಜಯಪುರ: ದೇವನಹಳ್ಳಿ ತಾಲ್ಲೂಕು ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಎರಡೂ ಪ್ರಕರಣಗಳ ತನಿಖೆ ಕೈಗೊಂಡಿದ್ದ ವಿಜಯಪುರ ಪೊಲೀಸರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … Read more