ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು…
ವಿಜಯ ದರ್ಪಣ ನ್ಯೂಸ್… ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು… ಪ್ರಖ್ಯಾತ ಸಿನಿಮಾ ನಟನೊಬ್ಬನನ್ನು ಕೊಲೆ ಆರೋಪದ ಖಚಿತ ಆಧಾರದ ಮೇಲೆ ಪಂಚತಾರಾ ಹೋಟೆಲ್ಲಿನ ವ್ಯಾಯಾಮ ಶಾಲೆಯಿಂದ ಬಂಧಿಸಿ ಕರೆತರಲಾಗುತ್ತದೆ. ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತದೆ. ಮಾಧ್ಯಮ ಲೋಕ ಪೊಲೀಸ್ ತನಿಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಕೊಲೆ ಆರೋಪಿ ಯಾವ ರೀತಿ ಕೊಲೆ ಮಾಡಿದ ಎಂಬುದನ್ನು ಬಹುತೇಕ ಮಾಧ್ಯಮಗಳು ತಮಗೆ ತೋಚಿದಂತೆ ಹೇಳುತ್ತವೆ. ಪೋಲಿಸ್ ತನಿಖಾ ವರದಿ ತುಂಬಾ ಸ್ಪಷ್ಟವಾಗಿ ದಾಖಲೆಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸುತ್ತದೆ….