ತಾಲಿಬಾನ್ ಮತ್ತು ಪಾಕಿಸ್ತಾನ್…… ಆಯ್ಕೆ ಯಾವುದು ?
ವಿಜಯ ದರ್ಪಣ ನ್ಯೂಸ್…. ತಾಲಿಬಾನ್ ಮತ್ತು ಪಾಕಿಸ್ತಾನ್…… ಆಯ್ಕೆ ಯಾವುದು ? ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕಿಂತ ಪಾಕಿಸ್ತಾನದ ಮಿಲಿಟರಿ ನಿಯಂತ್ರಣದ ಪ್ರಜಾಪ್ರಭುತ್ವ ವ್ಯವಸ್ಥೆ ಎಷ್ಟೋ ಉತ್ತಮ. ಶತ್ರುವಿನ ಶತ್ರು ಮಿತ್ರ ಎಂಬುದು ರಾಜಕೀಯವಾಗಿ, ರಕ್ಷಣಾತ್ಮಕವಾಗಿ ಒಳ್ಳೆಯ ಚಾಣಕ್ಯ ನೀತಿ ಎಂಬುದೇನು ನಿಜ, ಆದರೆ ಆ ಶತ್ರುವಿನ ಶತ್ರು ಎಷ್ಟು ಪ್ರಾಮಾಣಿಕ, ಎಷ್ಟು ಯೋಗ್ಯ, ದೀರ್ಘಕಾಲದಲ್ಲಿ ಅವರೊಂದಿಗೆ ಹೊಂದಬಹುದಾದ ಸಂಬಂಧಗಳ ಅರ್ಹತೆ, ಅವರ ಸಾಮಾಜಿಕ ಮತ್ತು ರಾಜಕೀಯ ಬದ್ಧತೆ, ಮನಸ್ಥಿತಿ…