ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ : ಜಿಲ್ಲಾಧಿಕಾರಿ ಡಾ.ಶಿವಶಂಕರ್.
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ,ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.4 ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ಶಿವಶಂಕರ್. ಎನ್. ಅವರು ಕರೆ ನೀಡಿದ್ದಾರೆ. ಗೌರಿ ಹಾಗೂ ಗಣೇಶನ ಹಬ್ಬದ ಪ್ರಯುಕ್ತ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲ ಮಾಲಿನ್ಯ ಉಂಟಾಗುವುದು. ಮಾನ್ಯ ಉಚ್ಛ ನ್ಯಾಯಾಲಯ…