ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ರದ್ದುಗೊಳಿಸಿ: ಸಿ.ಮುನಿಯಪ್ಪ ಅಗ್ರಹ
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕನ್ನಡ ಭಾಷೆಗೆ ಅವಮಾನ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ರದ್ದುಗೊಳಿಸಬೇಕೆಂದು ಭಾರತ ಜನ ಜಾಗೃತಿ ಸೇನೆ ರಾಜ್ಯಧ್ಯಕ್ಷ ಸಿ ಮುನಿಯಪ್ಪ ಆಗ್ರಹ ಮಾಡಿದರು . ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತ ಕನ್ನಡ ನಾಡಿನಲ್ಲಿರುವ ಏಳುಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದು, ಕರ್ನಾಟಕದಲ್ಲಿ ಹುಟ್ಟಿ ಬೆಳೆದು ಕನ್ನಡ ನೆಲ ಜಲ ಅನುಭವಿಸಿ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿ ಬೆಂಗಳೂರಿನ ಕನ್ನಡಿಗರ ಮತದಿಂದ ವಿಧಾನಸಭೆಗೆ ಆಯ್ಕೆಯಾದ ಸಚಿವ ಜಮೀರ್ ಅಹ್ಮದ್ ಖಾನ್ ಅವರು…