ಜಲ ಜೀವನ್ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ
ವಿಜಯ ದರ್ಪಣ ನ್ಯೂಸ್. ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು ,ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 31 ಮನೆ ಮನೆಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದ್ದು, ವಿಳಂಬ ಮಾಡದೇ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು…