ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ: ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ರಕ್ಷಣೆ.
ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 07 ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ವಿವಿಧ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು ಚಿಕನ್ ಮತ್ತು ಮಟನ್ ಸ್ಟಾಲ್‌ಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮೇಲೆ ತಂಡವು ಅನಿರೀಕ್ಷಿತ ಕಾರ್ಯಾಚರಣೆ ನಡೆಸಿ 01 ಬಾಲಕಾರ್ಮಿಕ ಮತ್ತು 10 ಕಿಶೋರ ಕಾರ್ಮಿಕರನ್ನು ರಕ್ಷಿಸಿದೆ. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ,…
