ಬೆಳಗಿನ ವಾಯುವಿಹಾರದಲ್ಲಿ ಕಂಡದ್ದು……..
ವಿಜಯ ದರ್ಪಣ ನ್ಯೂಸ್….. ಬೆಳಗಿನ ವಾಯುವಿಹಾರದಲ್ಲಿ ಕಂಡದ್ದು…….. ಎಂದಿನಂತೆ ಬೆಳಗಿನ 4 ಗಂಟೆಗೆ ಎದ್ದವನು ಅಂದಿನ ಬರಹಗಳನ್ನು ಬರೆದು Post ಮಾಡಿ 5/30 ಕ್ಕೆ ಸರಿಯಾಗಿ ಮನೆಯಿಂದ ಹೊರಟೆ….. ತುಂತುರು ಹನಿಗಳ ನಡುವೆ ತೂರಿಬಂದ ತಣ್ಣನೆಯ ಗಾಳಿ ಮೈಸೋಕಿಸಿ ರೋಮಾಂಚನ ಉಂಟುಮಾಡಿತು. ಆಹ್ಲಾದಕರ ವಾತಾವರಣ ಗಿಡಮರಗಳ ನಡುವಿನಿಂದ ತೂರಿಬಂದ ಪಕ್ಷಿಗಳ ಕಲರವ – ಮಂದಿರದಿಂದ ಭಕ್ತಿಗೀತೆ ಮಸೀದಿಯಿಂದ ನಮಾಜು, ಚರ್ಚಿನಿಂದ ಪ್ರಾರ್ಥನೆ ಮೂಡಿ ಬರುತ್ತಿದ್ದು ಸಂಗೀತದ ರಸಾನುಭವ ಮುದನೀಡಿತು……… ಬೆಳಗ್ಗೆ ಸೇವಿಸಿದ್ದ ಅಸ್ಸಾಂನ ರುಚಿ ರುಚಿಯಾದ ಮಸಾಲಾ…
