ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್….. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂ.ಗ್ರಾ.ಜಿಲ್ಲೆ, ಜ.30: ಸರ್ಕಾರಿ ನೌಕರರು ದೈನಂದಿನ ವೃತ್ತಿಯ ಜೊತೆಗೆ ಕ್ರೀಡೆ, ವ್ಯಾಯಾಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯ ವೃದ್ಧಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ…
