ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ…..
ವಿಜಯ ದರ್ಪಣ ನ್ಯೂಸ್…. ಮಂಗಳೂರಿನ ಪ್ರತೀಕಾರದ ಕೋಮು ಹತ್ಯೆಗಳಿಗೆ ನಾವೇ ಇತಿಶ್ರೀ ಹಾಡಬೇಕಿದೆ…. ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ….. ತುಂಬಾ ಕಷ್ಟದ ಸಮಯ ಕಣ್ರೀ. ತಲೆಗೊಂದು ಮಾತನಾಡಬೇಡಿ. ಕೂಗಾಡಬೇಡಿ, ಕಿರುಚಾಡಬೇಡಿ. ಪೆಟ್ರೋಲ್ ಸುರಿಯಬೇಡಿ, ಬೆಂಕಿ ಹಚ್ಚಬೇಡಿ….. ಸ್ವಲ್ಪವೂ ಕಾಮನ್ ಸೆನ್ಸ್ ಇಲ್ಲವಲ್ರೀ. ಸಮಸ್ಯೆ ಒಂದೋ ಎರಡೋ ಅಲ್ಲ, ಹಲವಾರು….. ಕೊರೋನಾ ವೈರಸ್, ಭೀಕರ ಮಳೆ, ಪೆಹಲ್ಗಾಮ್ ಹತ್ಯಾಕಾಂಡ, ಪಾಕಿಸ್ತಾನದೊಂದಿಗೆ ಸಂಘರ್ಷ, ರೈತರ ಸಮಸ್ಯೆ, ಇವುಗಳ ಮಧ್ಯೆ ಹಿಂದೂ ಮುಸ್ಲಿಂ ಆಂತರಿಕ ಸಂಘರ್ಷ ಪ್ರಾರಂಭವಾದರೆ ಅದನ್ನು…
