ಸೀಡ್ ಲೆಸ್ ಯುವ ಜನಾಂಗ…..
ವಿಜಯ ದರ್ಪಣ ನ್ಯೂಸ್…. ಸೀಡ್ ಲೆಸ್ ಯುವ ಜನಾಂಗ….. ಹೌದು ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ ಯುವತಿಯರ ಮಾನಸಿಕ ಸ್ಥಿತಿ ಗಮನಿಸಿದರೆ ಸೀಡ್ ಲೆಸ್ ಜನಾಂಗವೊಂದು ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ. ಜಾಗತೀಕರಣದ ಪ್ರಭಾವದಿಂದಾಗಿ ಭಾರತದ ಮಧ್ಯಮ ವರ್ಗದ ಕುಟುಂಬಗಳಲ್ಲಿ ಬಡತನ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಯಿತು. ಊಟ ಬಟ್ಟೆ ವಸತಿಯ ವಿಷಯದಲ್ಲಿ ಮಕ್ಕಳಿಗೆ ಹೆಚ್ಚಿನ ಕೊರತೆಯಾಗದಂತೆ ಪೋಷಕರು ನೋಡಿಕೊಂಡರು. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಕಂಡುಬಂದಿತು. ಅವಿಭಕ್ತ ಕುಟುಂಬಗಳು ಶಿಥಿಲವಾಗಿ ಚಿಕ್ಕ…
