ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ……….
ವಿಜಯ ದರ್ಪಣ ನ್ಯೂಸ್….. ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ………. ಟಿ ವಿ ಧಾರಾವಾಹಿಗಳಲ್ಲಿ ಅತ್ತೆ ಸೊಸೆಗೆ ತೊಂದರೆ ಕೊಡುವುದನ್ನು ನೋಡಿ ಕಣ್ಣೀರಾಗುವಿರಿ, ಆದರೆ ನಿಮ್ಮ ಮನೆಯ ಅದೇ ವಾತಾವರಣವನ್ನು ಮರೆಯುವಿರಿ……. ಸಿನಿಮಾದಲ್ಲಿ ನಾಯಕ ಭ್ರಷ್ಟ ರಾಜಕಾರಣಿಗಳನ್ನು ಚಚ್ಚುವುದು ನೋಡಿ ಸಿಳ್ಳೆ ಹೊಡೆಯುವಿರಿ, ಆದರೆ ನಿಜ ಜೀವನದಲ್ಲಿ ಅದೇ ರಾಜಕಾರಣಿಗಳ ಹಿಂಬಾಲಕರಾಗಿರುವಿರಿ……. ಕಥೆಗಳಲ್ಲಿ ಇಡೀ ಬದುಕನ್ನೇ ಇತರರಿಗಾಗಿ ತ್ಯಾಗ ಮಾಡುವ ಪಾತ್ರಗಳಲ್ಲಿ ನಿಮ್ಮನ್ನೇ ಕಲ್ಪಿಸಿಕೊಳ್ಳುತ್ತೀರಿ, ಆದರೆ ವಾಸ್ತವದಲ್ಲಿ ಎಲ್ಲವೂ ನನಗೇ ಇರಲಿ ಎಂದು ದುರಾಸೆ ಪಡುವಿರಿ….
