ಉನ್ನತ ಶಿಕ್ಷಣದಲ್ಲಿ ಜಾತಿ ಮತ್ತು ಭ್ರಷ್ಟಾಚಾರ…….
ವಿಜಯ ದರ್ಪಣ ನ್ಯೂಸ್….. ಉನ್ನತ ಶಿಕ್ಷಣದಲ್ಲಿ ಜಾತಿ ಮತ್ತು ಭ್ರಷ್ಟಾಚಾರ……. ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ವ್ಯಾಪಾರಕ್ಕಿಳಿದ ಉನ್ನತ ಶಿಕ್ಷಣದ ವಿಶ್ವವಿದ್ಯಾಲಯಗಳು…… ಭಾರತದ ವಿಶ್ವವಿದ್ಯಾಲಯಗಳಿಗೆ ಐತಿಹಾಸಿಕ ಮಹತ್ವವಿದೆ. ಭಾರತದಲ್ಲಿ ಅಜ್ಞಾನ, ಅನಕ್ಷರತೆ ಬಹಳ ಹಿಂದಿನಿಂದಲೂ ತಾಂಡವವಾಡುತ್ತಿದ್ದರೂ, ಶೋಷಿತ ವರ್ಗಗಳನ್ನು ಶಿಕ್ಷಣದಿಂದ ದೂರ ಇಟ್ಟಿದ್ದರೂ, ಕೆಲವು ವರ್ಗಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮವಾಗಿಯೇ ಇತ್ತು. ಗುರುಕುಲ ಶಿಕ್ಷಣದ ಜೊತೆಗೆ ಭಾರತದಲ್ಲಿ ಬಹಳ ಹಿಂದೆಯೇ ನಳಂದ, ತಕ್ಷಶಿಲಾ ಮುಂತಾದ ವಿಶ್ವವಿದ್ಯಾಲಯಗಳಿದ್ದವು. ಸ್ವಾತಂತ್ರ ಪೂರ್ವದಲ್ಲಿಯೇ ಬನಾರಸ್ ಹಿಂದೂ ವಿಶ್ವವಿದ್ಯಾಲಯ ಸ್ಥಾಪಿತವಾಯಿತು. ಸ್ವಾತಂತ್ರ್ಯ ನಂತರದಲ್ಲಿ…