ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ……….
ವಿಜಯ ದರ್ಪಣ ನ್ಯೂಸ್… ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………. ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ ಯಾರಿಗೂ ತಿಳಿದಿಲ್ಲ. ಆ ಉಳಿದ ಸಮಯವನ್ನು ತೀವ್ರವಾಗಿ ಬದುಕಬೇಕೆಂಬ ಉತ್ಕಟ, ಅದಮ್ಯ ಭಾವನೆ ಜಾಗೃತವಾದಾಗ ಈ ರೀತಿಯ ಮಾತುಗಳು ಹೊರಡುತ್ತವೆ…… ಕೊಲ್ಕತ್ತಾದ ರವೀಂದ್ರನಾಥ್ ಟ್ಯಾಗೋರ್ ಅವರ ಸಮಾಧಿ ಬಳಿ ಹೋಗುವ ದಾರಿಯಲ್ಲಿ ರೈಲು…