ಅಭಿವೃದ್ಧಿ ಎಂದರೆ……
ವಿಜಯ ದರ್ಪಣ ನ್ಯೂಸ್….. ಅಭಿವೃದ್ಧಿ ಎಂದರೆ…… ಜನಸಂಖ್ಯೆಯ ಆಧಾರದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದರೆ ಆ ದೇಶ ಇನ್ನೂ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿಲ್ಲಾ ಎಂದೇ ಹೇಳಬೇಕು. ಆಧುನಿಕತೆ ಬೆಳೆದಂತೆ ಅಪರಾಧಗಳು ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿಯ ದಾರಿ ತಪ್ಪಾಗಿದೆ ಎಂದೇ ಭಾವಿಸಬೇಕು. ಅಕ್ಷರಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಮೋಸ, ವಂಚನೆ, ಭ್ರಷ್ಟಾಚಾರ ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿ ಅನುಮಾನಾಸ್ಪದವಾಗಿದೆ ಎಂದು ಊಹಿಸಬಹುದು. ಆಸ್ಪತ್ರೆ, ಸಿಸಿ ಟಿವಿ, ಮೆಡಿಕಲ್ ಲ್ಯಾಬೋರೇಟರಿಗಳು, ಪೋಲೀಸ್ ಸ್ಟೇಷನ್ನುಗಳು ಹೆಚ್ಚಳವಾದಷ್ಟು ದೇಶದ ಅಭಿವೃದ್ಧಿ ಹಿಮ್ಮುಖವಾಗಿದೆ ಎಂದು…
